ಮಡಿಕೇರಿ, ಸೆ. ೨೫: ಗ್ರಾಮ ಆಡಳಿತ ಅಧಿಕಾರಿಗಳ ಹಾಗೂ ಗ್ರಾಮ ಸಹಾಯಕರ ಕುಂದುಕೊರತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಾ. ೨೬ರಿಂದ (ಇಂದಿನಿAದ) ರಾಜ್ಯ ವ್ಯಾಪಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಹಮ್ಮಿಕೊಳ್ಳುವ ಸಲುವಾಗಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ, ಜಿಲ್ಲಾ ಘಟಕ ವತಿಯಿಂದ ಕೊಡಗು ಜಿಲ್ಲೆಯ ಐದು ತಾಲೂಕಿನ ತಹಶೀಲ್ದಾರ್‌ರವರಿಗೆ, ಉಪವಿಭಾಗಾಧಿಕಾರಿ, ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಸಂಘದ ಕೇಂದ್ರ ಸಂಘದ ಕಾರ್ಯಕಾರಿಣಿ ನಿರ್ಣಯದಂತೆ ಇಲಾಖೆಯ ವತಿಯಿಂದ ಅಭಿವೃದ್ಧಿಪಡಿಸಲಾಗಿರುವ ೧೭ ಅಧಿಕ ತಂತ್ರಾAಶಗಳನ್ನು ಮೊಬೈಲ್, ಲ್ಯಾಪ್ ಟಾಪ್, ಇಂಟರ್ನೆಟ್ ಹಾಗೂ ಅವಶ್ಯ ಸೌಲಭ್ಯಗಳನ್ನು ನೀಡದೆ ಅವುಗಳನ್ನು ನಿರ್ವಹಿಸಲು ಒತ್ತಡ ಏರುತ್ತಿರುವ ಬಗ್ಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವ ಜೊತೆಗೆ ಸೇವಾ ವಿಷಯಗಳಿಗೆ ಸಂಬAಧಿಸಿದAತೆ ಸೌಲಭ್ಯಗಳನ್ನು ಒದಗಿಸಬೇಕು, ಗ್ರಾಮ ಸಹಾಯಕರ ಸೇವಾ ಭದ್ರತೆ ಮಾಡಬೇಕು ಎಂದು ಆಗ್ರಹಿಸಿ ಬೇಡಿಕೆಗಳು ಈಡೇರುವವರೆಗೂ ಮುಷ್ಕರ ಹೂಡುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ.