ಕುಶಾಲನಗರ, ಸೆ. ೨೫: ರಾಷ್ಟ್ರ ಕಂಡ ಮಹಾನ್ ಪತ್ರಕರ್ತರಾದ ರಾಷ್ಟçಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ವ್ಯಕ್ತಿತ್ವವನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸ್ಥಳೀಯ ಎಪಿಸಿಎಂಎಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಏರ್ಪಡಿಸಿದ್ದ ಕುಶಾಲನಗರ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಾತಂತ್ರö್ಯ ಪೂರ್ವದಲ್ಲಿ ಮಹಾತ್ಮಗಾಂಧಿ ಪತ್ರಿಕೋದ್ಯಮದ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದರು. ಅದೇ ರೀತಿ ಡಾ. ಅಂಬೇಡ್ಕರ್ ಅವರು ಐದು ಪತ್ರಿಕೆಗಳ ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು. ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರು ಪತ್ರಿಕಾ ವಿತರಕರಾಗಿ ಹೋರಾಟದ ಬದುಕು, ಬೆಳೆದು ಬಂದ ದಾರಿ ನಮ್ಮೆಲ್ಲರ ಸ್ಪೂರ್ತಿಯಾಗಬೇಕು. ಇಂತಹ ಮಹಾನ್ ನಾಯಕರ ಆದರ್ಶ ನಮಗೆ ಬೆಳಕಾಗಲಿ ಎಂದು ಆಶಯ ವ್ಯಕ್ತಪಡಿಸಿದರು.
೮೦ ರ ಕಾಲಘಟ್ಟದಲ್ಲಿ ಪತ್ರಿಕೆಗಳ ಸ್ವರೂಪ ಬದಲಾವಣೆ ಕಂಡಿದೆ. ಬಹು ರಾಷ್ಟ್ರೀಯ ಕಂಪನಿಗಳ ಪ್ರವೇಶದ ನಂತರ ಎಲ್ಲಾ ಕ್ಷೇತ್ರಗಳು ಉದ್ಯಮವಾಗಿ ರೂಪುಗೊಂಡವು. ಅದೇ ರೀತಿ ಪತ್ರಿಕೋದ್ಯಮ, ಕ್ರೀಡಾ ಕ್ಷೇತ್ರಗಳು ಕೂಡ ಉದ್ಯಮವಾಗಿ ಬದಲಾವಣೆಯಾಗಿವೆ ಎಂದರು.
ಇAದು ಬ್ಲಾಕ್ಮೇಲ್ ಪತ್ರಕರ್ತರಿಂದ ನೈಜ ಪತ್ರಕರ್ತ ಕಳೆದುಹೋಗುವ ಸ್ಥಿತಿ ಉಂಟಾಗಿದೆ. ಬ್ಲಾಕ್ ಮೇಲ್ ಪತ್ರಕರ್ತರ ಸಂಖ್ಯೆ ಅಧಿಕವಾಗಿದ್ದು, ಇಂತಹವರಿAದ ಸಮಾಜಕ್ಕೆ ಕಳಂಕ ಉಂಟಾಗುತ್ತಿದೆ. ಇಂತಹ ವ್ಯಕ್ತಿಗಳನ್ನು ಪತ್ರಿಕೋದ್ಯಮದಿಂದ ದೂರ ಇಡುವ ಕೆಲಸವನ್ನು ನಾವುಗಳೇ ಮಾಡಬೇಕು ಎಂದು ಕರೆ ನೀಡಿದರು. ಪತ್ರಕರ್ತರು ಸಮಾಜದ, ಶೋಷಿತರ, ಸಮಸ್ಯೆಗಳ ಧ್ವನಿಯಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಹೋಬಳಿ ಸಂಘದ ಬೆಳ್ಳಿ ಮಹೋತ್ಸವ ಅಂಗವಾಗಿ ಹೊರತರಲು ಉದ್ದೇಶಿರುವ ೧ಬೆಳ್ಳಿ ಪಯಣ' ಸ್ಮರಣ ಸಂಚಿಕೆಯ ಮುಖಪುಟ ಬಿಡುಗಡೆ ಮಾಡಿದ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಕುಶಾಲನಗರದಲ್ಲಿ ಪತ್ರಕರ್ತ ಭವನ ನಿರ್ಮಾಣ ಮಾಡಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಶಾಸಕರ ಅನುದಾನದ ಜೊತೆಗೆ ದಾನಿಗಳಿಂದಲೂ ಸಹಕಾರ ಕೊಡಿಸಲು ಪ್ರಯತ್ನಿಸುತ್ತೇನೆ.
ಪತ್ರಕರ್ತರು ನೈಜ ಹಾಗೂ ವಸ್ತು ಸ್ಥಿತಿ ವರದಿಗಳನ್ನು ಮಾಡುವ ಮೂಲಕ ಸಮಾಜದ ಏಳಿಗೆಗೆ ಒತ್ತು ನೀಡಬೇಕು ಎಂದರು. ಇಂದಿನ ಕಂಪ್ಯೂಟರ್ ಹಾಗೂ ಹೈಟೆಕ್ ತಂತ್ರಜ್ಞಾನ ವ್ಯವಸ್ಥೆಯಲ್ಲಿ ಪತ್ರಕರ್ತರು ವೃತ್ತಿ ನೈಪುಣ್ಯತೆಯನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಾಜಿ ಸಚಿವ ಎಂ.ಪಿ. ಅಪ್ಪಚ್ಚುರಂಜನ್ ಮಾಜಿ ಅಧ್ಯಕ್ಷರುಗಳನ್ನು ಸನ್ಮಾನಿಸಿ ಮಾತನಾಡಿ, ಕುಶಾಲನಗರ ಹೋಬಳಿ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಆಚರಣೆ ಮಾಡುತ್ತಿರುವುದು ಸಂತೋಷದ ವಿಚಾರವಾಗಿದೆ. ಪತ್ರಕರ್ತರು ಸಮಾಜದಲ್ಲಿನ ಅಂಕುಡೊAಕುಗಳನ್ನು ತಿದ್ದುವ ಹಾಗೂ ಸಮಸ್ಯೆಗಳನ್ನು ಬಿಂಬಿಸುವAತಹ ಲೇಖನಗಳನ್ನು ಪ್ರಕಟಿಸುವಂತಾಗಬೇಕು ಎಂದು ಸಲಹೆ ನೀಡಿದರು.
ಸಾರ್ವಜನಿಕ ಸಭೆಯಲ್ಲಿ ರಾಜಕಾರಣಿಗಳು, ಪತ್ರಕರ್ತರು ಯಾವ ರೀತಿ ಸಾಮಾಜಕ್ಕೆ ಬೆಳಕು ಚೆಲ್ಲುತ್ತಾರೆ ಎಂಬುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದರು. ವಿದ್ಯಾರ್ಥಿ ಶಿಸ್ತು, ಸಮಯ ಪ್ರಜ್ಞೆ ಮೈಗೂಡಿಸಿಕೊಳ್ಳಬೇಕು. ಗುರಿಯೊಂದಿಗೆ ಕಠಿಣ ಪರಿಶ್ರಮ, ಕನಸು ನನಸು ಮಾಡಿಕೊಳ್ಳುವತ್ತ ಪ್ರಯತ್ನ ಮಾಡಬೇಕು ಎಂದರು. ತಮ್ಮ ವೃತ್ತಿಯೊಂದಿಗೆ ಪ್ರತಿಯೊಬ್ಬರೂ ಪರಿಸರ ರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಹೇಳಿದ ಅವರು ಕಳೆದ ಹಲವು ವರ್ಷಗಳಿಂದ ತಾನು ಕೂಡ ಅನೇಕ ಸಸಿಗಳನ್ನು ನೆಡುವ ಕೆಲಸ ಮಾಡಿರುವುದಾಗಿ ನೆನಪಿಸಿದರು.
ಶಕ್ತಿ ದಿನಪತ್ರಿಕೆ ಪ್ರಧಾನ ಸಂಪಾದಕ ಜಿ. ರಾಜೇಂದ್ರ ಅವರು ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿ, ಸಂವಿಧಾನದ ನಾಲ್ಕನೇ ಅಂಗವಾಗಿರುವ ಮಾಧ್ಯಮ ರಂಗ ತುಂಬಾ ಮಹತ್ವದ್ದಾಗಿದೆ, ಸಮಾಜದ ಏಳಿಗೆಯಲ್ಲಿ ಪತ್ರಿಕಾ ಕ್ಷೇತ್ರ ತನ್ನದೇ ಆದ ಛಾಪನ್ನು ಮೂಡಿಸಿದೆ. ಕಾಲಕ್ಕೆ ತಕ್ಕಂತೆ ಪ್ರತಿಯೊಬ್ಬರೂ ಬದಲಾಗಬೇಕಾಗಿದೆ. ಪ್ರತಿಯೊಬ್ಬರೂ ತಮ್ಮ ಗುರಿಯನ್ನು ಹೊಂದಬೇಕಾಗಿದೆ ಎಂದು ಹೇಳಿದ ಅವರು ಹೋಬಳಿ ಬೆಳ್ಳಿ ಮಹೋತ್ಸವ ಆಚರಣೆ ಸಂತೋಷ ತರುವ ಸಂಗತಿ. ಬೆಳೆದು ಬಂದ ದಾರಿಯನ್ನು ಮೆಲುಕು ಹಾಕಿಕೊಳ್ಳುವುದರ ಜೊತೆಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರನ್ನು ನೆನಪಿಸಿಕೊಂಡು ಗೌರವಿಸಿರುವುದು ಉತ್ತಮ ಕಾರ್ಯವಾಗಿದೆ ಎಂದರು.
ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಅಧ್ಯಕ್ಷತೆ ವಹಿಸುವುದರೊಂದಿಗೆ ಪ್ರಾಸ್ತಾವಿಕವಾಗಿ ಮಾತನಾಡಿ, ಪತ್ರಕರ್ತರು ಸಮಾಜಮುಖಿಯಾಗಿ ಕೆಲಸಮಾಡಬೇಕು. ಪತ್ರಕರ್ತರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಆಗಬೇಕು. ರಾಜಕಾರಣಿಗಳು ಹಾಗೂ ಅಧಿಕಾರಿಗಳು ಪತ್ರಕರ್ತರನ್ನು ನಿರ್ಲಕ್ಷö್ಯ ಭಾವನೆಯಿಂದ ಕಾಣುವ ಸ್ಥಿತಿ ಇದೆ. ಇಂತಹ ಪರಿಸ್ಥಿತಿಯನ್ನು ಮನಗಂಡ ಹಿರಿಯ ಪತ್ರಕರ್ತ ಬಿ.ಆರ್.ನಾರಾಯಣ ಅವರು ಹೋಬಳಿ ಸಂಘವನ್ನು ಸ್ಥಾಪಿಸುವ ಮೂಲಕ ಪತ್ರಕರ್ತರ ಶ್ರೇಯೊಭಿವೃದ್ಧಿಗೆ ವಿಶೇಷ ಒತ್ತು ನೀಡಿದರು ಎಂದರಲ್ಲದೆ ಕಳೆದ ೨೫ ವರ್ಷಗಳ ಸುದೀರ್ಘ ಅವಧಿಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷೆ ಬಿ.ಆರ್. ಸವಿರಾ ರೈ ಸಾಧಕರನ್ನು ಸನ್ಮಾನಿಸಿ ಗೌರವಿಸಿದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ರಮೇಶ್ ಕುಟ್ಟಪ್ಪ, ಕೊಡಗು ಪ್ರೆಸ್ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಸಂಘದ ರಾಷ್ಟಿçÃಯ ಸಮಿತಿ ಸದಸ್ಯ ಸುನಿಲ್ ಪೊನ್ನೆಟ್ಟಿ ಅವರು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರ ನಡುವೆ ನಡೆದ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ವಿಜೇತರಾದ ತಂಡದ ಸದಸ್ಯರಿಗೆ ಬಹುಮಾನ ವಿತರಿಸಿದರು.
ಸನ್ಮಾನ : ಹೋಬಳಿ ಸಂಘದ ಅಧ್ಯಕ್ಷರಾಗಿ ೨೫ ವರ್ಷಗಳ ಅವಧಿಯಲ್ಲಿ ಸೇವೆ ಸಲ್ಲಿಸಿ ಸಂಘದ ಏಳಿಗೆಗಾಗಿ ಶ್ರಮಿಸಿದ ಸ್ಥಾಪಕ ಅಧ್ಯಕ್ಷ ಬಿ.ಆರ್. ನಾರಾಯಾಣ, ಕೆ.ಕೆ. ನಾಗರಾಜ ಶೆಟ್ಟಿ, ಎಂ.ಎನ್. ಚಂದ್ರಮೋಹನ್, ಸಬಲಂ ಬೋಜಣ್ಣ ರೆಡ್ಡಿ, ರಘು ಹೆಬ್ಬಾಲೆ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿ ಆತ್ಮೀಯವಾಗಿ ಗೌರವಿಸಲಾಯಿತು.
ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಡಾ. ಕಿಶೋರ್ ಕುಮಾರ್, ಪುರಸಭೆಯ ದಫೇದಾರ್ ಮೋಹನ್ ಕುಮಾರ್, ಸಮಾಜ ಸೇವಕ ಮುನೀರ್, ಮಹಿಳಾ ಭಜನಾ ಮಂಡಳಿ ಪ್ರಮುಖರಾದ ಪದ್ಮ ಪುರುಷೋತ್ತಮ, ಹಿರಿಯ ಪತ್ರಿಕಾ ವಿತರಕ ವಿ.ಪಿ. ಪ್ರಕಾಶ್ ನಿವೃತ್ತ ಮುಖ್ಯ ಶಿಕ್ಷಕ ನಜೀರ್ ಅಹ್ಮದ್, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರೂ, ಸಾಹಿತಿ ಬಾಚರಣಿಯಂಡ ಪಿ.ಅಪ್ಪಣ್ಣ, ಕುದುಪಜೆ ಬಸಪ್ಪ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಕೊಡವ ಸಮಾಜದ ನಿರ್ದೇಶಕಿ ಧರಣಿ ಸೋಮಯ್ಯ ಪ್ರಾರ್ಥಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್ ಸ್ವಾಗತಿಸಿದರು. ಕೊಡಗು ವಿವಿ ಉಪನ್ಯಾಸಕ ಡಾ. ಜಮೀರ್ ಅಹಮ್ಮದ್ ಹಾಗೂ ಜಿಲ್ಲಾ ಪತ್ರಕರ್ತರ ಸಂಘದ ನಿರ್ದೇಶಕ ಟಿ.ಆರ್. ಪ್ರಭುದೇವ್ ನಿರೂಪಿಸಿದರು. ಕೆ.ಕೆ. ನಾಗರಾಜ್ ಶೆಟ್ಟಿ ವಂದಿಸಿದರು.