ಮಡಿಕೇರಿ, ಸೆ. ೨೪: ವೀರಾಜಪೇಟೆ ಅರಣ್ಯ ವಲಯದ ವ್ಯಾಪ್ತಿಗೆ ಹಾಗೂ ಕದನೂರು, ಚೆಂಬೆಬೆಳ್ಳೂರು ಮತ್ತು ಹಾಲುಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಗಳಾದ ಅರಮೇರಿ, ಕದನೂರು. ಬೆಳ್ಳರಿಮಾಡು ಚಾಮಿಯಾಲ, ಮೈತಾಡಿ, ದೇವಣಗೇರಿ ಪುದುಕೋಟೆ, ಕುತ್ತೂರು, ಚೆಂಬೆಬೆಳ್ಳೂರು, ಐಮಂಗಲ, ಮಗ್ಗುಲ, ಹಾಲುಗುಂದ ಹಾಗೂ ಬೈರಂಬಾಡ ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆಯನ್ನು ತಾ.೨೫ ಮತ್ತು ೨೬ ರಂದು ನಡೆಯಲಿದೆ. ತೋಟದ ಮಾಲೀಕರು ಮತ್ತು ಕಾರ್ಮಿಕರು ಆ ದಿನಗಳು ತಮ್ಮ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಗ್ರಾಮಸ್ಥರು, ಶಾಲಾ ಮಕ್ಕಳು ಎಚ್ಚರಿಕೆಯಿಂದ ಇದ್ದು ಕಾಡಾನೆ ಕಾರ್ಯಾಚರಣೆ ಸಮಯದಲ್ಲಿ ಪಟಾಕಿ ಸಿಡಿಸಬಾರದೆಂದು ಹಾಗೂ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ವಲಯ ಅರಣ್ಯಾಧಿಕಾರಿ ತಿಳಿಸಿದ್ದಾರೆ.