ಮಡಿಕೇರಿ, ಸೆ. ೨೪: ಪ್ರಸಕ್ತ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾಯ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ವೆಬ್‌ಸೈಟ್ ವಿಳಾಸ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಸಲ್ಲಿಸಬೇಕು.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್ ಯೋಜನೆ(ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಗಂಗಾ ಕಲ್ಯಾಣ ಯೋಜನೆ, ಭೂ ಒಡೆತನ ಯೋಜನೆ,

ಹೆಚ್ಚಿನ ಮಾಹಿತಿಗೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ hಣಣಠಿs://ಚಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ hಣಣಠಿs://ಚಿಜiರಿಚಿmbಚಿvಚಿ.ಞಚಿಡಿಟಿಚಿಣಚಿಞಚಿ.gov.iಟಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ hಣಣಠಿs://ತಿತಿತಿ.ಞbಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಮತ್ತು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ hಣಣಠಿs://ಞssಞsಛಿ.ಞಚಿಡಿ.ಟಿiಛಿ.iಟಿ/ ನಿಗಮದ ಈ ವೆಬ್‌ಸೈಟ್ ಮೂಲಕ ಪಡೆದುಕೊಳ್ಳುವುದು.

ಫಲಾಪೇಕ್ಷಿಗಳು ಆನ್‌ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾAಶದ ವೆಬ್‌ಸೈಟ್ ವಿಳಾಸ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅಪ್‌ಲೋಡ್ ಮಾಡಿ ಅರ್ಜಿಯನ್ನು ಅಕ್ಟೋಬರ್ ೧೦ ರೊಳಗೆ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-೫೭೧೨೦೧ ದೂ.ಸಂ. ೦೮೨೭೨-೨೨೮೮೫೭ ನ್ನು ಸಂಪರ್ಕಿಸಬಹುದು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳ ಕಮ್ಮಟ

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ, ಹಾವೇರಿ ಜಿಲ್ಲೆ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಎಂಬ ಹೆಸರಿನಲ್ಲಿ ೩ ದಿನಗಳ ಕಮ್ಮಟವು ಅಕ್ಟೋಬರ್ ಕೊನೆಯ ವಾರದಲ್ಲಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿ, ಹಾವೇರಿ ಜಿಲ್ಲೆ ಇಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯಿರುವ ೨೦ ರಿಂದ ೪೫ ವರ್ಷ ವಯಸ್ಸುಳ್ಳ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ ೮ ಕೊನೆಯ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್ hಣಣಠಿ://ಞಚಿಡಿಟಿಚಿಣಚಿಞಚಿsಚಿhiಣhಥಿಚಿಚಿಛಿಚಿಜemಥಿ.oಡಿg ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಎನ್. ಕರಿಯಪ್ಪ ಅವರು ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರ ಸೇವೆ ಪಡೆಯಲು

ಪ್ರಸಕ್ತ ಸಾಲಿಗೆ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಕಾಲೇಜು, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲೂಕು, ಇಲ್ಲಿಗೆ ೨೦೨೪-೨೫ನೇ ಸಾಲಿಗೆ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿವರೆಗೆ ಕನ್ನಡ ಭಾಷೆ ಉಪನ್ಯಾಸಕರು ವಿದ್ಯಾರ್ಹತೆ ಬಿ.ಎ.ಮತ್ತು ಬಿಎಡ್ (ಕನ್ನಡ) ವಿಷಯಗಳಿಗೆ ಅನುಗುಣವಾಗಿ ಕನ್ನಡ ಭಾಷಾ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. (ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುವುದು).

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್‌ಎಂಸಿ ಕಾಲೇಜು ಹತ್ತಿರ, ಮಡಿಕೇರಿ, ಕಚೇರಿ ದೂ.ಸಂ. ೦೮೨೭೨-೨೨೫೫೨೮, ೯೬೮೬೧೩೮೬೮೮ ಮತ್ತು ಪ್ರಾಂಶುಪಾಲರು, ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಕಾಲೇಜು, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲೂಕು ದೂ.ಸಂ. ೭೬೭೬೪೭೩೭೬೭ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್. ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.