ಶನಿವಾರಸಂತೆ, ಸೆ. ೨೫: ಮೈಸೂರಿನ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ೧೩ ನೇ ವರ್ಷದ ವಾರ್ಷಿಕೋತ್ಸವ ಹಾಗೂ ಹಿಂದುಳಿದ ವರ್ಗದವರಿಗೆ ರಾಜರ್ಷಿ ಕೃಷ್ಣರಾಜ ಒಡೆಯರ್ ಮಾಡಿದ ಮೀಸಲಾತಿಯ ೧೦೫ ರ ಸಂಭ್ರಮಾಚರಣೆ ಪ್ರಯುಕ್ತ ಸಾಧಕ ಮಹಿಳೆಯರಿಗೆ ನೀಡಲಾಗುವ “ಶ್ರೀಮತಿ ಯಶೋಧರಮ್ಮ ದಾಸಪ್ಪ ಪ್ರಶಸ್ತಿ’’ಗೆ ಕೊಡಗು ಜಿಲ್ಲೆಯ ಸಾಹಿತಿ ಹಾಗೂ ಪತ್ರಕರ್ತೆ ಶ.ಗ. ನಯನತಾರಾ ಆಯ್ಕೆಯಾಗಿದ್ದಾರೆ. ನಯನತಾರಾ ಅವರ ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರದ ಸಾಧನೆ ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ತಾ. ೨೮ ರಂದು ಮೈಸೂರಿನ ಕಲಾಮಂದಿರ ಆವರಣದ ಕಿರುರಂಗಮAದಿರದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ಸಂಸ್ಥಾಪಕ ಅಧ್ಯಕ್ಷೆ ಎಚ್.ಎಲ್. ಯಮುನಾ ತಿಳಿಸಿದ್ದಾರೆ.