ಮಡಿಕೇರಿ, ಸೆ. ೨೪: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಹಾಗೂ “ಸ್ವಚ್ಛತಾ ಹೀ ಸೇವಾ ಅಂಗವಾಗಿ “ಸ್ವಭಾವ ಸ್ವಚ್ಛತೆ-ಸಂಸ್ಕಾರ ಸ್ವಚ್ಛತೆ” ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿದೆ.

ಕೊಡಗು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ದುಬಾರೆ ರಿವರ್ ರ‍್ಯಾಪ್ಟಿಂಗ್ ಅಸೋಸಿಯೇಷನ್ ಹಾಗೂ ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂಜರಾಯಪಟ್ಟಣ ಹಾಗೂ ಪ್ರವಾಸೋದ್ಯಮ ಪಾಲುದಾರರ ಸಹಯೋಗದಲ್ಲಿ ದುಬಾರೆ ಪ್ರವಾಸಿ ತಾಣದಲ್ಲಿ ತಾ. ೨೬ ರಂದು ಬೆಳಿಗ್ಗೆ ೮ ಗಂಟೆಗೆ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಲಿದೆ.

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಡಿಕೇರಿ ನಗರಸಭೆ, ಪ್ರವಾಸೋದ್ಯಮ ಇಲಾಖೆ, ತೋಟಗಾರಿಕೆ ಇಲಾಖೆ, ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್, ಹೋಂ-ಸ್ಟೇ ಆಸೋಸಿಯೇಷನ್, ಟೂರ್ ಮತ್ತು ಟ್ರಾವೆಲ್ಸ್ ಆಸೋಸಿಯೇಷನ್ ಹಾಗೂ ಪ್ರವಾಸೋದ್ಯಮ ಪಾಲುದಾರರ ಸಹಯೋಗದಲ್ಲಿ ತಾ. ೨೭ ರಂದು ಬೆಳಿಗ್ಗೆ ೮ ಗಂಟೆಗೆ ಗದ್ದುಗೆಯಿಂದ ರಾಜಸೀಟುವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.

ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು/ ಸಿಬ್ಬಂದಿಗಳು, ಸಂಘ ಸಂಸ್ಥೆಯವರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಕೋರಿದ್ದಾರೆ.