ಸಿದ್ದಾಪುರ, ಸೆ. ೨೬: ವೀರಾಜಪೇಟೆಯ ವಲಯ ಅರಣ್ಯ ವ್ಯಾಪ್ತಿಗೊಳಪಡುವ ದೇವಣಿಗೇರಿ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸೇರಿ ಕಾಡಿಗೆ ಅಟ್ಟುವಲ್ಲಿ ಯಶಸ್ವಿಯಾದರು.
ದೇವಣಿಗೇರಿ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಕಾಡಾನೆ ಹಿಂಡು ಬೀಡುಬಿಟ್ಟು ದಾಂಧಲೆ ನಡೆಸುತ್ತಿತ್ತು. ಅಲ್ಲದೆ ಕೃಷಿ ಫಸಲುಗಳನ್ನು ನಾಶಗೊಳಿಸುತ್ತಿದ್ದವು. ಈ ಹಿನೆÀ್ನಲೆಯಲ್ಲಿ ಗ್ರಾಮಸ್ಥರು ಕಾಡಾನೆಗಳ ಹಾವಳಿಯನ್ನು ತಡೆಗಟ್ಟಬೇಕು ಹಾಗೂ ಕಾಡಾನೆಗಳನ್ನು ಕಾಡಿಗಟ್ಟಬೇಕೆಂದು ಒತ್ತಾಯ ಪಡಿಸಿದ್ದರು. ಕಳೆದ ಎರಡು ದಿನಗಳಿಂದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಈ ಸಂದರ್ಭದಲ್ಲಿ ಮರಿಯಾನೆಗಳು ಸೇರಿದಂತೆ ೭ ಕಾಡಾನೆಗಳು ಕಂಡುಬAದಿತು ಎಂದು ವಲಯ ಅರಣ್ಯ ಅಧಿಕಾರಿ ಕೆ.ವಿ. ಶಿವರಾಂ ತಿಳಿಸಿದರು.
ಕಾರ್ಯಾಚರಣೆಯಲ್ಲಿ ವೀರಾಜಪೇಟೆ ತಾಲೂಕು ಉಪ ವಿಭಾಗ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್ ಹಾಗೂ ಎಸಿಎಫ್ ಗೋಪಾಲ್ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಆನೆ ಕಾರ್ಯಪಡೆ. ಆರ್.ಆರ್.ಟಿ. ತಂಡದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.