ಮೂರ್ನಾಡು, ಸೆ. ೨೬: ಮೂರ್ನಾಡು ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಮಾರುತಿ ಸಂಯುಕ್ತ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕುಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ - ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ ತಾ.೨೮ರಂದು ಮೂರ್ನಾಡು ವಿದ್ಯಾಸಂಸ್ಥೆ ಆಟದ ಮೈದಾನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಮಂಜುಳ ಕೆ. ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಮಾರುತಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಮುಂಡAಡ ಕೆ. ಅಪ್ಪಚ್ಚು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಂಗಧಾಮಪ್ಪ ಸಿ., ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ದೊಡ್ಡೇಗೌಡ ಬಿ.ಸಿ., ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಗಾಯತ್ರಿ ಬಿ.ಆರ್., ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.