ಮಡಿಕೇರಿ, ಸೆ. ೨೬: ಮಡಿಕೇರಿ ದಸರಾ ಆಚರಣೆ ಸಂಬAಧ ದಶಮಂಟಪ ಹಾಗೂ ಕರಗ ಉತ್ಸವ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸಭೆ ನಡೆಸಿದರು.
ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ , ಮಡಿಕೇರಿ ನಗರದಲ್ಲಿ ಮಂಟಪಗಳು ಸಾಗುವ ಮಾರ್ಗ ಹಾಗೂ ವೇಳಾಪಟ್ಟಿ ಬಗ್ಗೆ ಲಿಖಿತವಾಗಿ ಮಾಹಿತಿ ಒದಗಿಸುವಂತೆ ಹೇಳಿದರು.
ದಸರಾದಂದು ಮಂಟಪಗಳ ಮೆರವಣಿಗೆ ಸಂದರ್ಭದಲ್ಲಿ ಯಾವ ಮಂಟಪ ಯಾವ ವೇಳೆಯಲ್ಲಿ ಎಲ್ಲಿಂದ, ಯಾವ ಮಾರ್ಗ ತೆರಳಲಿದೆ ಎಂಬ ಬಗ್ಗೆ ಮಾಹಿತಿ ನೀಡುವಂತಾಗಬೇಕು. ಜೊತೆಗೆ ನಿಗದಿತ ವೇಳೆ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ತಿಳಿಸಿದರು.
ಮಂಟಪಗಳ ಮೆರವಣಿಗೆಗೆ ಸಂಬAಧಿಸಿದAತೆ ಸರಿಯಾದ ಮಾಹಿತಿ ಇದ್ದಲ್ಲಿ ಸಾರ್ವಜನಿಕರಿಗೆ ಒಳಿತಾಗಲಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಧ್ವನಿವರ್ಧಕ ಬಳಕೆ ಸಂಬAಧ ನಿಯಮಗಳನ್ನು ಪಾಲಿಸಬೇಕು. ಸಾರ್ವಜನಿಕ ಹಿತಾಸಕ್ತಿ ಅತೀ ಮುಖ್ಯ ಎಂಬುದನ್ನು ಯಾರೂ ಸಹ ಮರೆಯಬಾರದು ಎಂದು ತಿಳಿಸಿದರು. ಈಗಾಗಲೇ ಮಡಿಕೇರಿ ದಸರಾ ಧ್ವನಿವರ್ಧಕ (ಡಿಜೆ) ಸಂಬAಧಿಸಿದAತೆ ಪಿಐಎಲ್ ದಾಖಲಾಗಿದ್ದು, ಈ ಬಗ್ಗೆ ಪ್ರತಿಯೊಬ್ಬರಲ್ಲೂ ಮಾಹಿತಿ ಇರಬೇಕು.
ಮಡಿಕೇರಿ ದಸರಾ ಸಂಸ್ಕೃತಿ, ಸಂಪ್ರದಾಯ, ಆಚರಣೆ ಸಂಬAಧ ರಾಜ್ಯದ ಹೊರಭಾಗಕ್ಕೂ ಸಹ ತಿಳಿಯುವಂತಾಗಬೇಕು. ಆ ನಿಟ್ಟಿನಲ್ಲಿ ಈ ಬಾರಿ ಪ್ರತೀ ಮಂಟಪದ ಬಗ್ಗೆ ಕಿರು ಪರಿಚಯದ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂದರ್ಭ ಮಾತನಾಡಿದ ದಶಮಂಟಪ ಸಮಿತಿ ಅಧ್ಯಕ್ಷ ಜಗದೀಶ್, ಧ್ವನಿವರ್ಧಕ ಬಳಕೆ ಸಂಬAಧ ಈಗಾಗಲೇ ಎಲ್ಲಾ ಮಂಟಪಗಳ ಅಧ್ಯಕ್ಷರ ಜೊತೆ ಚರ್ಚಿಸಲಾಗಿದ್ದು, ಎಲ್ಲಾ ಮಂಟಪಗಳು ಸ್ವಯಂ ಪ್ರೇರಣೆಯಿಂದ ಯಾವ ರೀತಿ ಧ್ವನಿವರ್ಧಕ (ಡಿಜೆ) ಬಳಕೆ ಮಾಡಬೇಕು ಎಂಬ ಬಗ್ಗೆ ನಿಯಮಗಳನ್ನು ರೂಪಿಸಿಕೊಳ್ಳಲಾಗಿದೆ ಎಂದರು.
ಮಂಟಪ ತೆರಳುವ ಒಂದು ಬದಿಯಲ್ಲಿ ಮಾತ್ರ ಅಂಗಡಿಗಳನ್ನು ತೆರೆಯಲು ಅವಕಾಶ ಮಾಡಬೇಕು. ಎರಡು ಬದಿ ತೆರೆದರೆ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಲಿದೆ ಎಂದು ಮಂಟಪ ಸಮಿತಿಯ ರಾಜೇಶ್ ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜ್ ಮಾತನಾಡಿ, ಸುಗಮ ಸಾರಿಗೆ ಸಂಚಾರ ಹಾಗೂ ಜನರ ಓಡಾಟಕ್ಕೆ ಪೊಲೀಸ್ ಇಲಾಖೆಯಿಂದ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಂಟಪಗಳನ್ನು ಜಾಗ್ರತೆಯಿಂದ ಸುರಕ್ಷಿತ ಸ್ಥಳಕ್ಕೆ ತಲುಪಿಸಬೇಕು. ಆ ನಿಟ್ಟಿನಲ್ಲಿ ಎಲ್ಲಾ ಮಂಟಪಗಳು ಸಾರ್ವಜನಿಕರ ಹಿತಾಸಕ್ತಿಯಂತೆ ಸ್ವಯಂ ಪ್ರೇರಣೆಯಿಂದ ಕಾರ್ಯನಿರ್ವಹಿಸಬೇಕು ಎಂದರು.
ನಾಡಹಬ್ಬ ಮಡಿಕೇರಿ ದಸರಾವನ್ನು ವ್ಯವಸ್ಥಿತವಾಗಿ ಆಚರಿಸಲು ಎಲ್ಲರ ಸಹಕಾರ ಅತ್ಯಗತ್ಯ. ತಮ್ಮಲ್ಲಿಯೇ ಸ್ವಯಂ ಸೇವಕರನ್ನು ನಿಯೋಜಿಸಿಕೊಂಡು ದಸರಾ ಯಶಸ್ಸಿಗೆ ಶ್ರಮಿಸಬೇಕು ಎಂದು ಸುಂದರ್ ರಾಜ್ ಕೋರಿದರು.
ದಶಮಂಟಪ ಸಮಿತಿಯವರ ಮನವಿ, ಬೇಡಿಕೆಗಳಿಗೆ ಸಂಬAಧಿಸಿದAತೆ ಸ್ಪಷ್ಟ ಮಾಹಿತಿಯನ್ನು ಲಿಖಿತವಾಗಿ ಒದಗಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.
ದಶಮಂಟಪ ಸಮಿತಿಯ ಯೋಗೇಶ್, ರಂಜಿತ್ ಅವರು ಹಲವು ವಿಚಾರಗಳ ಕುರಿತು ಮಾತನಾಡಿದರು.