'ಮಡಿಕೇರಿ, ಸೆ.೨೬: ಸರ್ಕಾರದ ಪ್ರಮುಖ ಕಾರ್ಯಕ್ರಮಗಳಾದ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಮೈಸೂರು ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ನವೆಂಬರ್ ತಿಂಗಳಲ್ಲಿ ಗ್ಯಾರಂಟಿ ಅನುಷ್ಠಾನ ಜಾಗೃತಿ ಸಪ್ತಾಹ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮೈಸೂರು ವಿಭಾಗದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಸರ್ಕಾರ ಗೃಹ ಲಕ್ಷಿö್ಮ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಈ ಗ್ಯಾರಂಟಿ ಯೋಜನೆಗಳಿಂದ ಬಿಪಿಎಲ್ ಕುಟುಂಬದವರು ಯಾವುದೇ ಕಾರಣಕ್ಕೂ ವಂಚಿತರಾಗಬಾರದು, ಅರ್ಹರೆಲ್ಲರಿಗೂ ಗ್ಯಾರಂಟಿ ಯೋಜನೆಗಳು ತಲುಪಬೇಕು. ಶೇ.೧೦೦ ರಷ್ಟು ಪ್ರಗತಿ ಸಾಧಿಸಬೇಕು. ಆ ನಿಟ್ಟಿನಲ್ಲಿ ಗ್ಯಾರಂಟಿ ಅನುಷ್ಠಾನ ಸಪ್ತಾಹವನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಗ್ಯಾರಂಟಿ ಅನುಷ್ಠಾನ ಜಾಗೃತಿ ಸಪ್ತಾಹ ಸಂಬAಧ ರಾಜ್ಯ ಅಧ್ಯಕ್ಷರ ಗಮನಕ್ಕೆ ತಂದು, ರಾಜ್ಯಾದ್ಯಂತ ಈ ಕಾರ್ಯಕ್ರಮ ಆಯೋಜಿಸಲು ಮುಂದಿನ ದಿನಗಳಲ್ಲಿ ಚಿಂತಿಸಲಾಗುವುದು. ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ತಾ.ಪಂ.ಇಒಗಳು, ಪಿಡಿಒಗಳು ಗ್ರಾಮ ಆಡಳಿತ ಅಧಿಕಾರಿಗಳು, ಸೇರಿದಂತೆ ಹಲವು ಇಲಾಖೆಗಳ ಜೊತೆಗೂಡಿ ಮನೆ ಮನೆ ಸಮೀಕ್ಷೆ ಮಾಡಿ ಗ್ಯಾರಂಟಿ ಯೋಜನೆಯಿಂದ ಯಾರು ದೂರವಿದ್ದಾರೆ. ಗ್ಯಾರಂಟಿ ಯೋಜನೆ ಇದುವರೆಗೆ ಪಡೆಯದಿರಲು ಕಾರಣವೇನು? ಮತ್ತಿತರ ಬಗ್ಗೆ ಮಾಹಿತಿ ಪಡೆಯಬೇಕು. ಜೊತೆಗೆ ಅಗತ್ಯ ದಾಖಲೆಗಳು ಇಲ್ಲದ ಕುಟುಂಬಗಳಿAದ ಮಾಹಿತಿ ತಿಳಿದು, ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಗ್ಯಾರಂಟಿ ಯೋಜನೆ ಪ್ರಗತಿ ಸಾಧಿಸಬೇಕು ಎಂದು ನಿರ್ದೇಶನ ನೀಡಿದರು.

ನವೆಂಬರ್ ತಿಂಗಳ ಮೊದಲ ವಾರದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬAಧ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡು, ನಂತರ ಸಪ್ತಾಹ ಹಮ್ಮಿಕೊಳ್ಳಬೇಕು. ಈ ಕಾರ್ಯಕ್ರಮದಲ್ಲಿ ಎಲ್ಲಾ ಹಂತದ ಇಲಾಖಾ ಅಧಿಕಾರಿಗಳು ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಬೇಕು ಎಂದರು.

ಇಡೀ ರಾಷ್ಟçದಲ್ಲಿ ಗ್ಯಾರಂಟಿ ಯೋಜನೆಗಳ ಪದವನ್ನು ಬಳಸಿದ್ದು ಸಿದ್ದರಾಮಯ್ಯ ಸರ್ಕಾರದ್ದಾಗಿದೆ. ಆ ನಿಟ್ಟಿನಲ್ಲಿ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಒಂದು ವರ್ಷದೊಳಗೆ ಜಾರಿ ಮಾಡಿದೆ. ವಾರ್ಷಿಕವಾಗಿ ೫೬ ಸಾವಿರ ಕೋಟಿ ರೂ.ವನ್ನು ಗ್ಯಾರಂಟಿ ಯೋಜನೆಗೆ ವಿನಿಯೋಗ ಮಾಡಲಾಗುತ್ತಿದ್ದು, ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆದಿದೆ ಎಂಬುದನ್ನು ಯಾರೂ ಸಹ ಮರೆಯುವಂತಿಲ್ಲ ಎಂದು ಡಾ.ಪುಷ್ಪಾ ಅಮರನಾಥ್ ಅವರು ವಿವರಿಸಿದರು. ಗೃಹಲಕ್ಷಿö್ಮ ಯೋಜನೆಯಡಿ ಫಲಾನುಭವಿಗಳಿಗೆ ಎರಡು ತಿಂಗಳ ಹಣ ಪಾವತಿಗೆ ಬಾಕಿ ಇದ್ದು, ಶೀಘ್ರ ಪಾವತಿಯಾಗಲಿದೆ.

ಸರ್ಕಾರಿ ಕಚೇರಿಗಳು ಸೇರಿದಂತೆ ಬಸ್ ನಿಲ್ದಾಣ, ಆಸ್ಪತ್ರೆ, ಮಾರುಕಟ್ಟೆ, ಹೀಗೆ ವಿವಿಧ ಜನದಟ್ಟಣೆ ಪ್ರದೇಶದಲ್ಲಿ ಒಂದು ವಾರದಲ್ಲಿ ಗ್ಯಾರಂಟಿ ಫಲಕಗಳನ್ನು ಅಳವಡಿಸಬೇಕು. ಜನರಿಗೆ ಸರ್ಕಾರದ ಕಾರ್ಯಕ್ರಮವನ್ನು ತಿಳಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ತಾಕೀತು ಮಾಡಿದರು. ಗೃಹಲಕ್ಷಿö್ಮ ಯೋಜನೆ ಸಂಬAಧಿಸಿದAತೆ ಮಾಹಿತಿ ಪಡೆದ ಪುಷ್ಪಾ ಅಮರನಾಥ್ ಅವರು ಶೇ.೯೮.೯೯ ರಷ್ಟು ಸಾಧನೆ ಮಾಡಲಾಗಿದ್ದು, ಬಾಕಿ ಇರುವ ೧೦೮೯ ಮಂದಿಗೆ ಫಲಾನುಭವಿಗಳಿಗೆ ಯೋಜನೆ ತಲುಪಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷÀ ಧರ್ಮಜ ಉತ್ತಪ್ಪ ಅವರು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಎಲ್ಲಾ ಕುಟುಂಬಗಳಿಗೆ ಗ್ಯಾರಂಟಿ ಯೋಜನೆ ತಲುಪಬೇಕು. ಅದರಲ್ಲೂ ಜಿಲ್ಲೆಯಲ್ಲಿ ಆದಿವಾಸಿ ಕುಟುಂಬಗಳು ಸರ್ಕಾರದ ಯೋಜನೆ ಪಡೆಯಲು ಪರಿತಪಿಸುತ್ತಿದ್ದಾರೆ. ಆದಿವಾಸಿ ಜನರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದು, ಅಂತಹ ಆದಿವಾಸಿ ಕುಟುಂಬಗಳಿಗೆ ಅಗತ್ಯ ದಾಖಲೆಗಳನ್ನು ಒದಗಿಸಿ ಗ್ಯಾರಂಟಿ ಯೋಜನೆ ಕಡ್ಡಾಯವಾಗಿ ತಲುಪಿಸುವಂತಾಗಬೇಕು ಎಂದು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.

ಗೃಹಲಕ್ಷಿö್ಮ ಯೋಜನೆ ಬಗ್ಗೆ ಮಾಹಿತಿ ನೀಡಿದ ನಟರಾಜು ಅವರು ಜಿಲ್ಲೆಯಲ್ಲಿ ೧,೧೬,೫೯೪ ಜನರು ನೋಂದಣಿಯಾಗಿದ್ದು, ೧,೧೫,೪೨೫ ಮಂದಿ ಫಲಾನುಭವಿಗಳಿಗೆ ನೇರ ನಗದು ಪಾವತಿಯಾಗುತ್ತದೆ. ಇದುವರೆಗೆ ೨೩.೦೮ ಕೋಟಿ ರೂ. ಪಾವತಿಯಾಗಿದೆ ಎಂದು ಮಾಹಿತಿ ನೀಡಿದರು.

ಗೃಹಜ್ಯೋತಿ ಯೋಜನೆಯಡಿ ೧,೫೬,೬೨೨ ಮಂದಿಯಲ್ಲಿ ೧,೫೫,೫೦೮ ಮಂದಿ ಹೆಸರು ನೋಂದಾಯಿಸಿದ್ದು, ೧,೧೧೪ ಮಂದಿ ಬಾಕಿ ಇದ್ದಾರೆ. ಒಟ್ಟಾರೆ ಗೃಹಜ್ಯೋತಿ ಯೋಜನೆಯಡಿ ಶೇ.೯೯.೨೯ ರಷ್ಟು ಪ್ರಗತಿ ಸಾಧಿಸಲಾಗಿದ್ದು, ೭,೯೫೯ ಲಕ್ಷ ರೂ. ಸಹಾಯಧನ ಕಲ್ಪಿಸಲಾಗಿದೆ ಎಂದು ಸೆಸ್ಕ್ ಇಇ ಅನಿತಾ ಬಾಯಿ ಮಾಹಿತಿ ನೀಡಿದರು.

ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ೯೯,೧೬೮ ಅರ್ಹ ಪಡಿತರ ಚೀಟಿದಾರರಲ್ಲಿ ೯೭,೫೭೦ ಪಡಿತರ ಚೀಟಿದಾರರಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆಯಾಗಿದೆ. ೧೫೯೮ ಮಂದಿಗೆ ನಗದು ವರ್ಗಾವಣೆಗೆ ಬಾಕಿ ಇದ್ದು, ಶೇ.೯೮.೩೯ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ ಶರತ್ ಮಾಹಿತಿ ನೀಡಿದರು.

ಶಕ್ತಿ ಯೋಜನೆಗೆ ಸಂಬAಧಿಸಿ ದಂತೆ ಒಟ್ಟು ೭೧,೧೨,೧೯೧ ವಯಸ್ಕ ಮಹಿಳಾ ಪ್ರಯಾಣಿಕರು ಮತ್ತು ೧,೪೯,೭೪೦ ಹೆಣ್ಣು ಮಕ್ಕಳು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿ ನಿಯರು ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿ ಯೋಜನೆಯ ಪ್ರಯೋಜನ ಪಡೆದಿದ್ದು, ಸರಾಸರಿ ೧೫,೦೯೮ ಪ್ರಯಾಣಿಕರು ಒಂದು ದಿನಕ್ಕೆ ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿರುತ್ತಾರೆ. ಸೆಪ್ಟೆಂಬರ್, ೨೪ ರವರೆಗೆ ಒಟ್ಟು ಮೊತ್ತ ರೂ.೨೮,೫೮,೬೪,೯೫೭ ರಷ್ಟು ಸಂಸ್ಥೆಗೆ ಆದಾಯ ಬಂದಿರುತ್ತದೆ. ಸರಾಸರಿ ಒಂದು ದಿನದ ಆದಾಯ ರೂ. ೫,೯೪,೩೧೪ ಆಗಿದೆ ಎಂದು ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕÀ ಮಹಮದ್ ಅಲಿ ಮಾಹಿತಿ ನೀಡಿದರು. ಯುವನಿಧಿ ಯೋಜನೆ ಸಂಬAಧಿಸಿ ದಂತೆ ಮಾಹಿತಿ ನೀಡಿದ ರೇಖಾ ಗಣಪತಿ ಅವರು ಜಿಲ್ಲೆಯಲ್ಲಿ ೧,೧೮೯ ಮಂದಿ ಹೆಸರು ನೋಂದಾಯಿಸಿದ್ದು, ೧,೦೧೫ ಮಂದಿಗೆ ಡಿಬಿಟಿ ಮೂಲಕ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಶೇ.೮೫ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.

ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಗ್ಯಾರಂಟಿ ಯೋಜನೆಯ ಪ್ರಮುಖರಾದ ಪ್ರಶಾಂತ್, ಶರಿ ಗಿರೀಶ, ಕೆ.ಸಿ. ಭೀಮಯ್ಯ, ನಾಸಿರ್, ಅಣ್ಣಯ್ಯ, ಕೆ.ಎಂ.ಬಶೀರ್, ಮುಸ್ತಫ, ಧನ್ಯ, ಕೆ.ಜಿ. ಪೀಟರ್, ಕಾಂತರಾಜು, ಮಂದ್ರೀರ ಮೋಹನ್ ದಾಸ್, ಜಾನ್ಸನ್ ಅವರು ಹಲವು ವಿಚಾರಗಳ ಕುರಿತು ಪ್ರಸ್ತಾಪಿಸಿದರು.