ಶನಿವಾರಸಂತೆ, ಸೆ. ೨೬: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಹಾಗೂ ಹಾಸನದ ಅಮ್ಮ ಚಾರಿಟೇಬಲ್ ಟ್ರಸ್ಟ್, ಅಮ್ಮ ಕಣ್ಣಿನ ಆಸ್ಪತ್ರೆ ಮತ್ತು ರೆಟಿನಾಕೇರ್ ಸೆಂಟರ್ ಸಹಯೋಗದಲ್ಲಿ ಉಚಿತ ನೇತ್ರ ಪರೀಕ್ಷಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಅಮ್ಮ ಕಣ್ಣಿನ ಆಸ್ಪತ್ರೆಯ ಡಾ. ಪ್ರೀತಿ ಕಣ್ಣಿನ ತಪಾಸಣೆ ನಡೆಸಿದರು. ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶೋಕ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಮಹೇಶ್, ಲ್ಯಾಬ್ ಟೆಕ್ನಿಷಿಯನ್ ರಶೀದ್, ಸಿಬ್ಬಂದಿ, ಅಮ್ಮ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.