ಮಡಿಕೇರಿ, ಸೆ. ೨೬: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನೆಯ ೨೧ನೇ ವಾರ್ಷಿಕೋತ್ಸವವವು ಶ್ರದ್ಧಾಭಕ್ತಿಯಿಂದ ನೆರವೇರಿತು. ತಾ. ೨೪ರಿಂದ ವಿವಿಧ ಧಾರ್ಮಿಕ ಕೈಂಕರ್ಯಗಳು ನಡೆದು ಇಂದು ಬೆಳಿಗ್ಗೆ ಗುರುಗಣಪತಿ ಪೂಜೆ, ಪುಣ್ಯಾಹ, ಗಣಪತಿ ಹೋಮ, ಕಲಾಹೋಮ, ತತ್ವಹೋಮ, ತತ್ವಶಾಂತಿ ಹೋಮ, ದುರ್ಗಾ ಹೋಮ, ತತ್ವಕಲಶಾಭಿಷೇಕ, ಮಹಾಪೂಜೆ, ತೀರ್ಥ ಪ್ರಸಾದ ವಿನಿಯೋಗ ಹಾಗೂ ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನದಾನ ನಡೆಯಿತು.