ಅರ್ಥಪೂರ್ಣ ಕಾರ್ಯಕ್ರಮಕ್ಕೆ ನಿರ್ಧಾರ

ಸೋಮವಾರಪೇಟೆ, ಸೆ. ೨೬: ಇಲ್ಲಿನ ಕೊಡವ ಸಮಾಜವು ಸುವರ್ಣ ಮಹೋತ್ಸವದ ಹೊಸ್ತಿಲಿನಲ್ಲಿದ್ದು, ಡಿಸೆಂಬರ್ ೨೪ ಹಾಗೂ ೨೫ ರಂದು ಸಮಾಜದ ಸಭಾಂಗಣದಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ ನಡೆಸಲು ತೀರ್ಮಾನಿಸಲಾಯಿತು.

ಸಮಾಜದ ಸಭಾಂಗಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯುಕುಮಾರ್ ಅವರು, ೧೯೭೪ರಲ್ಲಿ ಪ್ರಾರಂಭಗೊAಡ ಸೋಮವಾರಪೇಟೆ ಕೊಡವ ಸಮಾಜ ಸುವರ್ಣ ಮಹೋತ್ಸವ ಆಚರಣೆಯ ಸಂಭ್ರಮದಲ್ಲಿದ್ದು, ಜಿಲ್ಲೆಯ ಮತ್ತು ರಾಜ್ಯದ ಇತರೆಡೆಯ ಕೊಡವ ಸಮಾಜಗಳ ಸಂಪೂರ್ಣ ಸಹಕಾರ ಅತ್ಯಗತ್ಯ ಎಂದರು.

ಸುವರ್ಣ ಮಹೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು, ಸಾಂಸ್ಕೃತಿಕ ಕಾರ್ಯಕ್ರಮಗಳು, ಕ್ರೀಡಾ ಸ್ಪರ್ಧೆಗಳು ನಡೆಯಲಿವೆ. ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ, ಇದುವರೆಗೂ ಸಮಾಜ ಬೆಳೆದ ಬಂದ ರೀತಿ, ಸಾಧನೆ ಹಾಗೂ ಬರಹಗಾರರ ಕಥೆ, ಕವನ, ಲೇಖನಗಳನ್ನೊಳಗೊಂಡ ಸ್ಮರಣ ಸಂಚಿಕೆಯನ್ನು ಹೊರತರಲಾಗುವುದು ಎಂದರು.

ಇದೇ ಸಂದರ್ಭ ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು. ಪೂರ್ವಭಾವಿ ಸಭೆಯಲ್ಲಿ ಸಮಾಜದ ಸದಸ್ಯರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಸಮಾಜದ ಉಪಾಧ್ಯಕ್ಷ ಬೊಳಂದAಡ ಕುಟ್ಟಪ್ಪ, ಕಾರ್ಯದರ್ಶಿ ಅನಿಲ್, ಖಜಾಂಚಿ ಪಾಡೆಯಂಡ ಮುತ್ತಣ್ಣ ಸೇರಿದಂತೆ ಆಡಳಿತ ಮಂಡಳಿ ಪದಾಧಿಕಾರಿಗಳು ಉಪಸ್ಥಿತರಿದ್ದರು.