ಮಡಿಕೇರಿ, ಸೆ. ೨೬: ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜು ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟಿçÃಯ ಸೇವಾ ಯೋಜನೆ ದಿನಾಚರಣೆ ಹಾಗೂ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ತ್ಯಾಗರಾಜ್ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪರಮೇಶ್ ಕೆ.ಎಸ್. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ನಿರ್ದೇಶಕ ಬಿ.ಕೆ. ಯತೀಶ್, ಕಾಲೇಜಿನ ಪ್ರಾಂಶುಪಾಲ ಎಂ.ಆರ್. ನಿರಂಜನ್, ಎನ್.ಎಸ್.ಎಸ್. ಅಧಿಕಾರಿ ಕೆ.ಹೆಚ್. ಯೋಗೇಂದ್ರ, ಸಹಾಯಾಧಿಕಾರಿ ಸಿ. ಶ್ರೇಯ, ಉಪನ್ಯಾಸಕರು, ಎನ್.ಎಸ್.ಎಸ್. ಸ್ವಯಂ ಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.