ಸೋಮವಾರಪೇಟೆ, ಸೆ. ೨೬: ಇಲ್ಲಿನ ರೋಟರಿ ಸಂಸ್ಥೆ ವತಿಯಿಂದ ರೋಟರಿ ಭವನದಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ವಿವಿಧ ಶಾಲೆಗಳ ಶಿಕ್ಷಕರುಗಳಿಗೆ ನೇಷನ್ ಬಿಲ್ಡರ್ ಅವಾರ್ಡ್ ನೀಡಿ ಸನ್ಮಾನಿಸಲಾಯಿತು.

ಗೋಣಿಮರೂರು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಹೆಚ್.ಆರ್. ಸುನಿತಾ, ದೊಡ್ಡಮಳ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಸ್.ಎಂ. ಆಶಾ, ಜಕ್ಕನಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಗುಣವತಿ, ದೊಡ್ಡಮಳ್ತೆ ಅಂಗನವಾಡಿ ಶಿಕ್ಷಕಿ ಹೆಚ್.ಎಸ್. ಸವಿತ, ಬೆಟ್ಟದಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಕೆ.ಎನ್. ಕವಿತ ಹಾಗೂ ಗೌಡಳ್ಳಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಜಿ.ಇ. ಪ್ರವೀಣ್ ಅವರುಗಳಿಗೆ ನೇಷನ್ ಬಿಲ್ಡರ್ ಅವಾರ್ಡ್ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೋಟರಿ ಅಧ್ಯಕ್ಷ ಜೆ.ಕೆ. ಪೊನ್ನಪ್ಪ ಮಾತನಾಡಿ, ಕಳೆದ ಹಲವು ವರ್ಷಗಳಿಂದ ರೋಟರಿ ಸಂಸ್ಥೆ ರಾಷ್ಟç ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಶಿಕ್ಷಕರಿಗೆ ನೇಷನ್ ಬಿಲ್ಡರ್ ಅವಾರ್ಡ್ ನೀಡಿ ಗೌರವಿಸುತ್ತಿದೆ. ಶಿಕ್ಷಕರು ಉತ್ತಮ ಶಿಕ್ಷಣ ನೀಡುವ ಮೂಲಕ ರಾಷ್ಟçಕ್ಕೆ ಉತ್ತಮ ಪ್ರಜೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದರು.

ಪ್ರಶಸ್ತಿ ಸ್ವೀಕರಿಸಿದ ಗೋಣಿಮರೂರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುನಿತ ಮಾತನಾಡಿ, ಎಲ್ಲ ದಾನಗಳಲ್ಲಿ ವಿದ್ಯಾದಾನ ಪ್ರಮುಖವಾಗಿದೆ. ಯಾರಿಗೆ ಶಿಸ್ತು, ಸಂಯಮ ಇರುತ್ತದೋ ಅಂತಹವರು ಮಾತ್ರ ಶಿಕ್ಷಕರಾಗಲು ಸಾಧ್ಯ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಭವಿಷ್ಯದ ಉತ್ತಮ ಪ್ರಜೆಗಳನ್ನು ರೂಪಿಸುವ ಕೆಲಸವನ್ನು ಶಿಕ್ಷಕರು ಮಾಡುತ್ತಿದ್ದಾರೆ ಎಂದರು.

ವೇದಿಕೆಯಲ್ಲಿ ರೋಟರಿ ಕಾರ್ಯದರ್ಶಿ ಕೆ.ಡಿ. ಬಿದ್ದಪ್ಪ, ವಲಯ ಸೇನಾನಿ ಎಂ.ಎA. ಪ್ರಕಾಶ್ ಇದ್ದರು.