x

ಮಡಿಕೇರಿ, ಸೆ. ೨೬: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಬರಹಗಾರರು ಮತ್ತು ಕಲಾವಿದರೊಂದಿಗೆ ಸಂವಾದ ಕಾರ್ಯಕ್ರಮವು ತಾ. ೨೯ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಮಡಿಕೇರಿ ಗ್ರಾಮಾಂತರ ಆರಕ್ಷಕ ರಾಣೆ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಸಾಹಿತಿ ಹಾಗೂ ನಿವೃತ್ತ ಶಿಕ್ಷಕ ಬಾರಿಯಂಡ ಜೋಯಪ್ಪ, ವಕೀಲರು ಮತ್ತು ಬರಹಗಾರರಾದ ಕುಡೆಕಲ್ಲು ಆರ್. ವಿದ್ಯಾಧರ, ಇತರರು ಪಾಲ್ಗೊಳ್ಳಲಿದ್ದಾರೆ ಎಂದು ರಿಜಿಸ್ಟಾçರ್ ಅವರು ತಿಳಿಸಿದ್ದಾರೆ.