ಮಡಿಕೇರಿ, ಸೆ. ೨೬: ಕರ್ನಾಟಕ ಗ್ರಾಮೀಣ ಬ್ಯಾಂಕ್ ಮಡಿಕೇರಿ ಪ್ರಾದೇಶಿಕ ಕಚೇರಿ ವತಿಯಿಂದ ನಗರದಲ್ಲಿ ಸ್ವಚ್ಛತೆಯೇ ಸೇವೆ ಅಭಿಯಾನದಡಿ ವಿವಿಧೆಡೆ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.

ಪ್ರಾದೇಶಿಕ ವ್ಯವಸ್ಥಾಪಕರಾದ ಉದಯ್ ಕುಮಾರ್ ಮಾತನಾಡಿ, ನಾವು ನಮ್ಮ ಮನೆಯ ಸುತ್ತಮುತ್ತಲ ಪ್ರದೇಶ ಹಾಗೂ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು.

ನಗರದ ಪೌರ ಕಾರ್ಮಿಕರಾದ ಲಕ್ಷಿö್ಮÃ ಹಾಗೂ ಮುರುಗ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಚೇರಿಯ ಹಿರಿಯ ವ್ಯವಸ್ಥಾಪಕ ಎಂ.ಎ. ರವಿಚಂದ್ರ, ವ್ಯವಸ್ಥಾಪಕರಾದ ವಿಶ್ವಾಸ್, ವೇಣುಗೋಪಾಲ್, ಜಗದೀಶ್, ಕಿಶೋರ್ ಕುಮಾರ್ ಸೇರಿದಂತೆ ಸಿಬ್ಬಂದಿ ಈ ಸಂದರ್ಭ ಇದ್ದರು.