ಮಡಿಕೇರಿ, ಸೆ.೨೬ : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಕೊಡಗು ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲೆಯ ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಗ್ರಾಮ ಸಹಾಯಕರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಪ್ಪುಪಟ್ಟಿ ಧರಿಸಿ ಪ್ರತಿಭಟಿಸಿದ ಪ್ರತಿಭಟನಾಕಾರರು ಇಲಾಖೆಯಿಂದ ಅಭಿವೃದ್ಧಿಪಡಿಸಲಾಗಿರುವ ೧೭ ಅಧಿಕ ತಂತ್ರಾAಶಗಳ ಮೊಬೈಲ್, ಲ್ಯಾಪ್‌ಟಾಪ್, ಇಂಟರ್ನೆಟ್ ಹಾಗೂ ಕಾರ್ಯನಿರ್ವಹಣೆಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡಬೇಕು. ಇವುಗಳನ್ನು ಸಮರ್ಪಕವಾಗಿ ನೀಡದೆ ಕರ್ತವ್ಯದ ಮೇಲೆ ಒತ್ತಡ ಹೇರುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮೂಲಭೂತ ಸೌಲಭ್ಯಗಳನ್ನು ನೀಡಬೇಕು, ಸೇವಾ ವಿಷಯಗಳಿಗೆ ಸಂಬAಧಿಸಿದAತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು, ಗ್ರಾಮ ಸಹಾಯಕರಿಗೆ ಸೇವಾ ಭದ್ರತೆ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ಸರ್ಕಾರ ಬೇಡಿಕೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸದ ಕಾರಣ ಕರ್ತವ್ಯ ಸ್ಥಗಿತಗೊಳಿಸಿ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಪ್ರಮುಖರು ತಿಳಿಸಿದರು.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷೆ ಅಕ್ಷತಾ ಬಿ.ಶೆಟ್ಟಿ, ಉಪಾಧ್ಯಕ್ಷ ಹರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಪಾಟೀಲ್, ಗೌರವಾಧ್ಯಕ್ಷ ಗೋಪಿನಾಥ್, ಖಜಾಂಚಿ ರವಿಚಂದ್ರ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಸಂದೀಪ್ ಶೆಣೈ, ವೀರಾಜಪೇಟೆಯ ಕೃಷ್ಣ, ಪೊನ್ನಂಪೇಟೆಯ ನಿತಿನ್, ಕುಶಾಲನಗರದ ಗುರು ದರ್ಶನ್, ಸೋಮವಾರಪೇಟೆಯ ಸಂತೋಷ್, ಕೊಡಗು ಜಿಲ್ಲಾ ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ಸುರೇಶ್, ಉಪಾಧ್ಯಕ್ಷ ಜನಾರ್ಧನ, ತಾಲ್ಲೂಕು ಅಧ್ಯಕ್ಷ ಪ್ರಸಾದ್ ಪೂಜಾರಿ, ಲೋಕೇಶ್, ನಾಗರಾಜ್, ಸುರೇಶ್ ಮತ್ತಿತರರು ಪಾಲ್ಗೊಂಡಿದ್ದರು.