ಸೋಮವಾರಪೇಟೆ, ಸೆ. ೨೬: ಇಲ್ಲಿನ ಕೊಡವ ಸಮಾಜದ ವತಿಯಿಂದ ತಾ. ೨೯ ರಂದು ಪಟ್ಟಣದ ಕೊಡವ ಸಮಾಜ ಸಭಾಂಗಣದಲ್ಲಿ ಕೈಲ್ ಮುಹೂರ್ತ ಸಂತೋಷ ಕೂಟ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಮಾಳೇಟಿರ ಬಿ. ಅಭಿಮನ್ಯುಕುಮಾರ್ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ ೧೦.೪೫ಕ್ಕೆ ನಡೆಯುವ ಕಾರ್ಯಕ್ರಮವನ್ನು ಮಾಜಿ ಸಚಿವ ಮಂಡೇಪAಡ ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಟ್ಟಚೆರವಂಡ ಕೆ. ನಾಚಪ್ಪ ಭಾಗವಹಿಸಲಿದ್ದಾರೆ. ಸಮಾಜದ ಪುರುಷರು, ಮಹಿಳೆಯರು, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.