ಸೋಮವಾರಪೇಟೆ, ಸೆ. ೨೬: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸೋಮವಾರಪೇಟೆ ತಾಲೂಕು ಹಾಗೂ ಹೋಬಳಿ ಘಟಕದ ವತಿಯಿಂದ ತಾ. ೨೮ ರಂದು ಬಳಗುಂದ ಸ.ಹಿ.ಪ್ರಾ. ಶಾಲೆಯಲ್ಲಿ ಎಸ್.ಎಸ್. ರಾಮಮೂರ್ತಿ ದತ್ತಿ ಉಪನ್ಯಾಸ ಕಾರ್ಯಕ್ರಮ ಅಪರಾಹ್ನ ೨ ಗಂಟೆಗೆ ನಡೆಯಲಿದೆ ಎಂದು ಹೋಬಳಿ ಅಧ್ಯಕ್ಷ ನಂಗಾರು ಕೀರ್ತಿಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕವಯತ್ರಿ ವಸಂತಿ ರವೀಂದ್ರ ಅವರು ‘ಕನ್ನಡ ಸಾಹಿತ್ಯದ ಬೆಳವಣಿಗೆಗೆ ಕನ್ನಡದ ಕವಿಗಳ ಕೊಡುಗೆ’ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಕ.ಸಾ.ಪ. ಜಿಲ್ಲಾಧ್ಯಕ್ಷ ಎಂ.ಪಿ. ಕೇಶವ ಕಾಮತ್, ತಾಲೂಕು ಅಧ್ಯಕ್ಷ ಎಸ್.ಡಿ. ವಿಜೇತ್, ಶಿಕ್ಷಣ ಇಲಾಖೆಯ ಸಮೂಹ ಸಂಪನ್ಮೂಲ ವ್ಯಕ್ತಿ ಡಿ.ಆರ್. ಗಿರೀಶ್, ಬೇಳೂರು ಗ್ರಾ.ಪಂ. ಉಪಾಧ್ಯಕ್ಷ ಕೆ.ಪಿ. ಸುದರ್ಶನ್, ಮುಖ್ಯ ಶಿಕ್ಷಕಿ ಕೆ.ಎಸ್. ಭಾಗ್ಯ ಭಾಗವಹಿಸಲಿದ್ದಾರೆ.