ಸೋಮವಾರಪೇಟೆ, ಸೆ. ೨೬: ಅರವತೋಕ್ಲುವಿನಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಸೋಮವಾರಪೇಟೆ ಪಟ್ಟಣದ ವಿಶ್ವ ಮಾನವ ಕುವೆಂಪು ಸಂಸ್ಥೆಯ ೭ನೇ ತರಗತಿ ವಿದ್ಯಾರ್ಥಿ ಬಿ.ಪಿ. ಸಮೃದ್ಧ್ ಜಯಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಜಿಲ್ಲಾಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಚೆಸ್ ಪಂದ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿರುವ ಸಮೃದ್ಧ್ ಹಾವೇರಿಯಲ್ಲಿ ನಡೆಯುವ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ಭಾಗಿಯಾಗಲಿದ್ದಾನೆ. ಈತ ಬಸವನಳ್ಳಿ ಗ್ರಾಮದ ಪ್ರವೀಣ್ಕುಮಾರ್ ಹಾಗೂ ಶಶಿಕಲಾ ದಂಪತಿ ಪುತ್ರ.