ಸೋಮವಾರಪೇಟೆ, ಸೆ. ೨೭: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯ ಘಟಕದ ನಿರ್ದೇಶಕರಾಗಿ ಕೊಡ್ಲಿಪೇಟೆಯ ರಾಜೇಶ್ವರಿ ನಾಗರಾಜ್ ಹಾಗೂ ವೀರಾಜಪೇಟೆಯ ಅನು ಚಂದ್ರ ಶೇಖರ್ ಅವರುಗಳು ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಬೆಂಗಳೂರಿನ ವೀರಶೈವ ಲಿಂಗಾಯತ ಮಹಾಸಭಾದ ಹಾನಗಲ್ಲು ಶಿವಕುಮಾರ ಸ್ವಾಮೀಜಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಂಘಟನೆಯ ರಾಷ್ಟಾçಧ್ಯಕ್ಷರು, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಸಮಿತಿಯ ಸದಸ್ಯರುಗಳಿಗೆ ಅಭಿನಂದನೆ ಸಮಾರಂಭ ಹಾಗೂ ಚುನಾವಣಾ ದೃಢೀಕರಣ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಈ ಆಯ್ಕೆ ನಡೆಯಿತು.
ಈ ಸಂದರ್ಭ ಮೂರನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟಿçÃಯ ಅಧ್ಯಕ್ಷರು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ, ಸಚಿವ ಈಶ್ವರ್ ಖಂಡ್ರೆ, ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿಯವರು, ಮುಖ್ಯ ಚುನಾವಣಾ ಅಧಿಕಾರಿ ದ್ಯಾಬೇರಿ, ಸಚಿವ ಶರಣ ಬಸಪ್ಪ ದರ್ಶನಾಪುರ, ಮಾಜಿ ಸಚಿವ ರಾಜಶೇಖರ್ ಪಾಟೀಲ್, ಸಂಸದ ರಾಘವೇಂದ್ರ ಯಡಿಯೂರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.