ಮಡಿಕೇರಿ, ಸೆ. ೨೮: ಕೊಡಗು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ೧೦೮ನೇ ಜನ್ಮ ದಿನವನ್ನು ಆಚರಿಸಲಾಯಿತು. ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಮತ್ತು ಬಿಜೆಪಿ ಜಿಲ್ಲಾ ಅಧ್ಯಕ್ಷ ರವಿ ಕಾಳಪ್ಪ, ನಗರ ಅಧ್ಯಕ್ಷ ಉಮೇಶ್ ಸುಬ್ರಮಣ್ಯ ಕಾರ್ಯಕ್ರಮ ಕುರಿತು ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಸೇರಿದಂತೆ ನಗರಸಭಾ ಸದಸ್ಯರು, ಪಕ್ಷದ ಕಾರ್ಯಕರ್ತರು ಹಾಜರಿದ್ದರು. ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್ ಸ್ವಾಗತಿಸಿ, ಕವನ್ ಕಾವೇರಪ್ಪ ವಂದಿಸಿದರು.