ಗೋಣಿಕೊಪ್ಪಲು, ಸೆ. ೨೮: ವೀರಾಜಪೇಟೆ ಮಂಡಲದ ಹಿಂದುಳಿದ ವರ್ಗಗಳ ಬಿಜೆಪಿ ಮೋರ್ಚಾ ವತಿಯಿಂದ ಕಾರ್ಯಕಾರಿಣಿ ಸಭೆ ಹಾಗೂ ಬಿಜೆಪಿ ಸದಸ್ಯತ್ವ ಅಭಿಯಾನ ವೀರಾಜಪೇಟೆಯ ಅಂಗಳಮ್ಮ ದೇವಾಲಯದ ಸಭಾಂಗಣದಲ್ಲಿ ಜರುಗಿತು.

ವೀರಾಜಪೇಟೆ ಮಂಡಲ ಬಿಜೆಪಿಯ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ನವೀನ್ ಉತ್ತಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಹೊಸ ಸದಸ್ಯತ್ವ ಅಭಿಯಾನಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಬೂತ್ ಮಟ್ಟದಲ್ಲಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕರ್ತರು ಪಕ್ಷ ಸಂಘಟನೆಗೆ ಒತ್ತು ನೀಡಬೇಕೆಂದು ಮನವಿ ಮಾಡಿದರು.

ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಭಾಗವಹಿಸಿ ಮಾತನಾಡಿ ತಮ್ಮ ದೈನಂದಿನ ಚಟುವಟಿಕೆ ನಡುವೆ ಪಕ್ಷದ ಸಂಘಟನೆಯ ಬಗ್ಗೆ ಆಸಕ್ತಿ ವಹಿಸಿ ಪಕ್ಷದ ಬೆಳವಣಿಗೆಗೆ ಸಹಕರಿಸಬೇಕು. ನಿಗಧಿತ ಸಮಯದಲ್ಲಿ ಸಭೆಗಳನ್ನು ನಡೆಸಿ ಪಕ್ಷದ ಆದೇಶಗಳನ್ನು ಪಾಲಿಸಬೇಕು. ಪ್ರತಿ ಬೂತ್‌ನಲ್ಲಿ ಬಿಜೆಪಿ ವತಿಯಿಂದ ಹೊಸ ಸದಸ್ಯತ್ವ ಅಭಿಯಾನ ನಡೆಯಬೇಕು. ಇದರಿಂದ ಪಕ್ಷ ಸಂಘಟನೆ ಹೆಚ್ಚಾಗುತ್ತದೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ್ ಪೂಜಾರಿ, ರಾಜ್ಯ ಉಪಾಧ್ಯಕ್ಷ ವಿಠಲ್ ಪೂಜಾರಿ, ರಾಜ್ಯ ಕಾರ್ಯದರ್ಶಿಯಾಗಿ ಆರ್.ಸಿ. ನಾರಾಯಣ್, ಜಿಲ್ಲಾ ಉಪಾಧ್ಯಕ್ಷ ಕೊಳೆಯಂಡ ಗಿರೀಶ್, ಸಾಮಾಜಿಕ ಜಾಲತಾಣದ ಸಂಚಾಲಕ ವಿಠಲ್ ಪೂಜಾರಿ ಹಾಕತ್ತೂರು, ವೀರಾಜಪೇಟೆ ನಗರ ಅಧ್ಯಕ್ಷÀ ಸುರೇಶ್, ಮಂಡಲ ಪ್ರಧಾನ ಕಾರ್ಯದರ್ಶಿ ಜೀತು ಪೂಜಾರಿ, ಹರೀಶ್, ಉಪಾಧ್ಯಕ್ಷ ಸುಬ್ರಹ್ಮಣ್ಯ, ಕಾರ್ಯದರ್ಶಿ ಗೀತಾ, ಸೇರಿದಂತೆ ಅನೇಕ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.