ಸೋಮವಾರಪೇಟೆ, ಸೆ. ೨೮: ಸಮೀಪದ ಯಡೂರು ಬಿ.ಟಿ.ಸಿ.ಜಿ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಕಾಲೇಜಿನ ಆವರಣದಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳಿಗೆ ಪರಿಸರ ಸ್ವಚ್ಛತೆಯ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಸುತ್ತಮುತ್ತ ಶ್ರಮದಾನ ಮಾಡಿ ಶುಚಿ ಗೊಳಿಸಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಕೆ.ಹೆಚ್. ಧನಲಕ್ಷಿö್ಮ ಅವರು ಸ್ವಚ್ಛತೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾಧಿಕಾರಿ ಪ್ರೊ. ಎಂ.ಎಸ್. ಶಿವಮೂರ್ತಿ ಅವರು ಅಭಿಯಾನದ ಮಹತ್ವದ ಕುರಿತು ವಿವರಿಸಿದರು. ಕಾರ್ಯಕ್ರಮದಲ್ಲಿ ವಾಣಿಜ್ಯ ಶಾಸ್ತç ವಿಭಾಗದ ಮುಖ್ಯಸ್ಥೆ ಪ್ರೊ. ಎಂ.ಎA. ಸುನಿತಾ ಅವರುಗಳು ಉಪಸ್ಥಿತರಿದ್ದರು.