ಮುಳ್ಳೂರು, ಸೆ. ೨೭: ಇತ್ತೀಚೆಗೆ ಅರವತೋಕ್ಲುನಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲಕಿಯರ ವಿಭಾಗದ ಚೆಸ್ ಪಂದ್ಯಾವಳಿಯಲ್ಲಿ ಭಾಗವಹಿಸಿದ ಸಮೀಪದ ಶನಿವಾರಸಂತೆ ಕಾವೇರಿ ವಿದ್ಯಾಸಂಸ್ಥೆಯ ೭ನೇ ತರಗತಿ ವಿದ್ಯಾರ್ಥಿನಿ ಎ.ವಿ.ಸಮನ್ವಿ ಪ್ರಥಮ ಸ್ಥಾನ ಪಡೆದುಕೊಂಡು ಅ೭ ರಂದು ಹಾವೇರಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಸಮನ್ವಿ ಅವರು ಶನಿವಾರಸಂತೆ ಸಮೀಪದ ಅಪ್ಪಶೆಟ್ಟಳ್ಳಿ ಗ್ರಾಮದ ವೇಣು ಮತ್ತು ವನಿತ ದಂಪತಿಯ ಪುತ್ರಿ.