ಸುಂಟಿಕೊಪ್ಪ, ಸೆ. ೨೭: ಆಯುಷ್ಮಾನ್ ಯೋಜನೆಯಡಿ ಉಚಿತ ಆರೋಗ್ಯ ಶಿಬಿರವನ್ನು ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿತ್ತು. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್. ಸುನಿಲ್ಕುಮಾರ್ ಉದ್ಘಾಟಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ಕುಮಾರ್ ಮಾತನಾಡಿ, ಆಯುಷ್ಮಾನ್ ಯೋಜನೆಯಡಿಯಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ವಾರ್ಡ್ಗಳಲ್ಲಿ ನಡೆಸಲಾಗುತ್ತಿದೆ. ಎಲ್ಲಾ ತರಹದ ಕಾಯಿಲೆಗಳ ಬಗ್ಗೆ ತಿಳುವಳಿಕೆ ನೀಡಲಾಗುತ್ತದೆ. ಸಾರ್ವಜನಿಕರು ಶಿಬಿರಗಳಲ್ಲಿ ಪಾಲ್ಗೊಂಡು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.
ಈ ಸಂದರ್ಭ ಜಿಲ್ಲಾ ಸರ್ಜನ್ ಡಾ. ನಂಜುAಡಯ್ಯ, ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ. ಚೇತನ್, ಡಾ. ಶ್ರೀನಿವಾಸ್, ಡಾ. ಓಂಪ್ರಿಯ ಇವರುಗಳು ಶಿಬಿರದ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಶಬೀರ್, ರಫೀಕ್ಖಾನ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ಸಂದರ್ಭ ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್, ಇಸಿಜಿ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದ ಸಂದರ್ಭ ಉತ್ತರಿಸಿದ ಅಧಿಕಾರಿಗಳು ಆಂಬ್ಯುಲೆನ್ಸ್ ವಾಹನವನ್ನು ಈಗಾಗಲೇ ರಿಪೇರಿಗೆ ಬಿಡಲಾಗಿದೆ. ಅದು ಬರುವ ತನಕ ಬದಲಿ ವಾಹನದ ವ್ಯವಸ್ಥೆಯನ್ನು ಮಾಡಲಾಗುವುದು. ಇಸಿಜಿ ವ್ಯವಸ್ಥೆ ಇದ್ದು ಅದನ್ನು ಮುಂದುವರೆಸುವAತೆ ಸಂಬAಧಿಸಿದವರಿಗೆ ಸೂಚಿಸಿದರು.