ಕೂಡಿಗೆ, ಸೆ. ೨೭: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿನ್ನೆನಹಳ್ಳಿ, ಹಳೇಗೊಟೆ, ಮರೂರು, ೬ನೇ ಹೊಸಕೋಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಬಾಣಾವರ ಅಂಚಿನ ಮೀಸಲು ಅರಣ್ಯ ಪ್ರದೇಶಗಳಿಂದ ಬರುವ ಕಾಡಾನೆಗಳ ಹಾವಳಿ ಅಧಿಕವಾದ ಹಿನ್ನೆಲೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಭೇಟಿ ನೀಡಿ ಗ್ರಾಮಸ್ಥರಿಂದ ಮನವಿಯನ್ನು ಸ್ವೀಕರಿಸಿದರು.

ನಂತರ ಮಾತನಾಡಿದ ಶಾಸಕ ಡಾ. ಮಂಥರ್ ಗೌಡ, ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೪ ಗ್ರಾಮಗಳಲ್ಲಿ ಕಾಡಾನೆ ಹಾವಾಳಿಗಳ ಬಗ್ಗೆ ಮಾಹಿತಿ ಪಡೆದಿರುತ್ತೇನೆ, ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮರ್ಪಕವಾದ ಮಾಹಿತಿಯನ್ನು ಪಡೆಯಲಾಗಿದೆ. ಅಲ್ಲದೆ ಈ ಭಾಗದ ಕಾಡಿನಂಚಿನ ಪ್ರದೇಶಗಳಿಗೆ ರೈಲ್ವೆ ಕಂಬಿಗಳ ಅಳವಡಿಕೆ ಸಂಬAಧಿಸಿದAತೆ ಕ್ರಮವನ್ನು ವಹಿಸಲಾಗುವುದು ಎಂದು ತಿಳಿಸಿದರು ನಂತರ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರುಣಾ ಕುಮಾರಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ವಿ.ಪಿ. ಶಶಿಧರ್, ಕೆ.ಪಿ.ಸಿ.ಸಿ. ಸದಸ್ಯ ನಟೇಶ್ ಗೌಡ, ಹೆಬ್ಬಾಲೆ ಗ್ರಾಮ ಪಂಚಾಯಿಸಸಸತಿ ಸದಸ್ಯರಾದ ಮಹದೇವ, ಮಂಜುನಾಥ, ಸೋಮವಾರಪೇಟೆ ವಲಯ ಅರಣ್ಯ ಅಧಿಕಾರಿ ಕುಮಾರ್, ಕುಶಾಲನಗರ ವಲಯ ಅರಣ್ಯ ಅಧಿಕಾರಿ ರತನ್ ಕುಮಾರ್, ಹೆಬ್ಬಾಲೆ ಉಪ ವಲಯ ಅರಣ್ಯಾಧಿಕಾರಿ ಭರತ್, ಬಾಣಾವರ ಉಪ ವಲಯ ಅರಣ್ಯಾಧಿಕಾರಿ ಶ್ರವಣ್ ಸೇರಿದಂತೆ ೪ ಗ್ರಾಮಗಳ ಗ್ರಾಮಸ್ಥರು ಹಾಜರಿದ್ದರು.