ವೀರಾಜಪೇಟೆ, ಸೆ. ೨೭: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ವೀರಾಜಪೇಟೆ ತಾಲೂಕು ವತಿಯಿಂದ ೨೦೨೩-೨೪ ನೇ ಸಾಲಿನಲ್ಲಿ ವೀರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆಯಲ್ಲಿ ಅತೀ ಹೆಚ್ಚು ಫಲಿತಾಂಶ ಬರಲು ಕಾರಣಕರ್ತರಾದ ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರು ಹಾಗೂ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ವೀರಾಜಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸನ್ಮಾನ ಸಮಾರಂಭ ನಡೆಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಚಿಲ್ಲವಂಡ ಕಾವೇರಪ್ಪ ಅವರು ಮಾತನಾಡಿ ವಿದ್ಯಾರ್ಥಿಗಳ ಪರೀಕ್ಷಾ ಸಾಧನೆಯ ಹಿಂದೆ ಶಿಕ್ಷಕರ ಶ್ರಮ ಅಡಗಿದ್ದು ಇನ್ನು ಮುಂದೆಯೂ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡಬೇಕೆಂದರು. ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕರಾದ ಎಚ್. ಎಲ್. ದಿವಾಕರ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲೆ ಜ್ಯೋತಿ ಅವರು ಮಾತನಾಡಿ, ವಿದ್ಯಾರ್ಥಿಗಳ ಪ್ರಗತಿಗೆ ಶ್ರಮಿಸಿದ ಶಿಕ್ಷಕರಿಗೆ ಕೃತಜ್ಞತೆಯನ್ನು ಸಲ್ಲಿಸಿದರು. ವೇದಿಕೆಯಲ್ಲಿ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕÀ ಎಚ್. ಆರ್. ಜಗದೀಶ್, ನಿವೃತ್ತ ಉಪನಿರ್ದೇಶಕ ದುರ್ಗಯ್ಯ ಚಿತ್ರದುರ್ಗ, ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳಾದ ಸಿದ್ದೇಶ್ವರ, ಕುಮಾರ್ ರವರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರನ್ನು ಒಳಗೊಂಡAತೆ ೧೫ ಜನ ಉಪನ್ಯಾಸಕರು, ೮ ಶಿಕ್ಷಕರು ಹಾಗೂ ಅತೀ ಹೆಚ್ಚು ಅಂಕಗಳನ್ನು ಪಡೆದ ೧೫ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.