ಮಡಿಕೇರಿ, ಸೆ.೨೭ : ಮೈಸೂರು ಮುಡಾ ಹಗರಣದಲ್ಲಿ ಭಾಗಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಕೊಡಗು ಜಿಲ್ಲಾ ಬಿಜೆಪಿ ಒತ್ತಾಯಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ; ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಹದಗೆಟ್ಟಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಭಾಗಿಯಾಗಿರುವದನ್ನು ಬಿಜೆಪಿ ಹೊರಗೆ ತಂದಿದ್ದು, ಹೋರಾಟ, ಪಾದಯಾತ್ರೆ ಮಾಡಿ ಒತ್ತಡ ಹೇರಿದ ಬಳಿಕ ಜನರಿಗೆ ವಸ್ತುಸ್ಥಿತಿ ಗೊತ್ತಾಗಿದೆ. ನಂತರದಲ್ಲಿ ಸಂವಿಧಾನದಲ್ಲಿ ರಾಜ್ಯದ ಪ್ರಥಮ ಪ್ರಜೆಯಾಗಿರುವ ರಾಜ್ಯಪಾಲರು ತನಿಖೆಗೆ ಪ್ರಾಸಿಕ್ಯೂಶನ್ಗೆ ಆದೇಶಿಸಿದ್ದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಜೀನಾಮೆ ನೀಡಿ ತನಿಖೆಗೆ ಸಹಕಾರ ನೀಡಬೇಕಿತ್ತು. ಆದರೆ, ರಾಜ್ಯಪಾಲರ ವಿರುದ್ಧವೇ ಉಚ್ಚ ನ್ಯಾಯಾಲಯಕ್ಕೆ ಹೋಗಿದ್ದಾರೆ. ಇದೀಗ ನ್ಯಾಯಾಲಯ ಕೂಡ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದು ಲೋಕಾಯುಕ್ತ ತನಿಖೆಗೆ ಆದೇಶಿಸಿದೆ. ಹಾಗಾಗಿ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕೆಂದು ಒತ್ತಾಯಿಸಿದರು.
ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಪರಿಸ್ಥಿತಿ ಬಂದೇ ಬರುತ್ತದೆ, ನೀಡದಿದ್ದಲ್ಲಿ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು. ಈ ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಅವರ ಮೇಲೆ ಆರೋಪ ಬಂದಾಗ ಅವರು ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಿದ್ದರು. ತನಿಖೆಯಲ್ಲಿ ಅವರು ನಿರಪರಾಧಿ ಎಂದು ಸಾಬೀತಾಯಿತು. ಸಿದ್ದರಾಮಯ್ಯ ಅವರು ಕೂಡ ಅದೇ ರೀತಿ ಮಾಡಲಿ ಎಂದು ಹೇಳಿದರು.
ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ; ಮುಡಾದಲ್ಲಿ ದುರುಪಯೋಗ ಕುರಿತು ಹೈಕೋರ್ಟ್ ತನಿಖೆಗೆ ಆದೇಶ ನೀಡಿದ್ದು, ಲೋಕಾಯುಕ್ತಕ್ಕೆ ತನಿಖೆಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು, ಹಿಂದೆ ಯಡಿಯೂರಪ್ಪ ಅವರ ಮೇಲೆ ಆರೋಪ ಬಂದಿದ್ದ ಸಂದರ್ಭ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸುವಂತೆ ಸಲಹೆ ಮಾಡಿದ್ದರು. ಅದರಂತೆ ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ್ದರು. ಇದೀಗ ಸಿದ್ದರಾಮಯ್ಯ ಅವರು ಕೂಡ ಅದೇ ನಿಯಮವನ್ನು ಪಾಲಿಸಬೇಕು. ದೋಷಮುಕ್ತರಾದರೆ ಮತ್ತೆ ಮುಖ್ಯಮಂತ್ರಿಯಾಗಿ ಮುಂದು ವರಿಯಲಿ ಎಂದು ಹೇಳಿದರು.
ಮುಡಾ ನಿವೇಶನಕ್ಕೆ ಸಂಬAಧಿಸಿದAತೆ ಎಲ್ಲವೂ ಬೋಗಸ್ ಆಗಿದೆ. ಈ ಬಗ್ಗೆ ನ್ಯಾಯಾಧೀಶರು ೧೯೭ ಪುಟಗಳ