ಐಗೂರು, ಸೆ. ೨೭: ಅಂರ‍್ರಾಷ್ಟಿçÃಯ ಪ್ರಜಾಪ್ರಭುತ್ವದ ದಿನಾಚರಣೆ ಅಂಗವಾಗಿ ಹರದೂರು ಗ್ರಾಮ ಪಂಚಾಯಿತಿ ವತಿಯಿಂದ ಗರಗಂದೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಸಹಭಾಗಿತ್ವದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಹರದೂರು ಗ್ರಾ.ಪಂ. ಉಪಾಧ್ಯಕ್ಷ ಸಲೀಂ ಹೊಸತೋಟ, ಪಂಚಾಯಿತಿ ಸದಸ್ಯ ಸುಬ್ಬಯ್ಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಪಂಚಾಯಿತಿ ಕಾರ್ಯದರ್ಶಿ ನವ್ಯ, ಮೊರಾರ್ಜಿ ವಸತಿ ಶಾಲೆಯ ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.