ಮಡಿಕೇರಿ, ಸೆ. ೨೮: ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್, ಬೆಂಗಳೂರು ವತಿಯಿಂದ ಅಪ್ರೆಂಟೀಸ್ (ಶಿಶಿಕ್ಷÄ) ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿಯೊಂದಿಗೆ ಐಟಿಐ ವಿಭಾಗದಲ್ಲಿ ಫಿಟ್ಟರ್, ಟೆರ್ನ್ರ್, ಮೆಷಿನಿಷ್ಟ್, ಎಲೆಕ್ಟಿçಷಿಯನ್, ವೆಲ್ಡರ್, ಕೊಪಾ, ಸೀಟ್ ಮೆಟಲ್‌ವರ್ಕರ್, ಟೂಲ್ ಅಂಡ್ ಡೈ ಮೇಕರ್, ಸಿಎನ್‌ಸಿ ಪ್ರೋಗ್ರಾಮರ್ ಕಮ್ ಆಪರೇಟರ್ ಟ್ರೇಡ್‌ನಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ.

ವಯೋಮಿತಿ ೧೮ ರಿಂದ ೩೦ ವರ್ಷಗಳ ತರಬೇತಿ ಅವಧಿಯಲ್ಲಿ ಸರ್ಕಾರಿ ನಿಯಮಾನುಸಾರ ಸ್ಟೆöÊಫಂಡ್ ನೀಡಲಾಗುತ್ತದೆ. ಅರ್ಜಿ ನಮೂನೆ ಈ ಕಚೇರಿಯಿಂದ ಪಡೆದು ಭರ್ತಿ ಮಾಡಿ ಮರು ಅರ್ಜಿ ಸಲ್ಲಿಸಲು ಅಕ್ಟೋಬರ್ ೧೦ ಕೊನೆ ದಿನವಾಗಿದೆ. ನಿಗದಿತ ಅರ್ಜಿ ನಮೂನೆಯೊಂದಿಗೆ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಪ.ಜಾತಿ/ಪ.ಪಂಗಡ/ಓ.ಬಿ.ಸಿ/ಅAಗವಿಕಲ ಸರ್ಟಿಫಿಕೇಟ್, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಜೆರಾಕ್ಷ್ಪ್ರತಿ, ಎನ್.ಟಿ.ಸಿ. ಪ್ರಮಾಣಪತ್ರ, ಒಂದು ಪಾಸ್‌ಪೋರ್ಟ್ ಭಾವಚಿತ್ರ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ: hಣಣಠಿs://ಚಿಠಿಠಿಡಿeಟಿಣiಛಿeshiಠಿiಟಿಜiಚಿ.gov.iಟಿ/ಛಿಚಿಟಿಜiಜಚಿಣe-ಡಿegisಣಡಿಚಿಣioಟಿ ನಲ್ಲಿ ನೋಂದಾಯಿಸಿದ ವಿವರದ ಪ್ರತಿಯೊಂದಿಗೆ ನಿಗದಿತ ದಿನಾಂಕದೊಳಗೆ ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ ೦೮೨೭೨-೨೨೫೮೫೧, ೮೨೯೬೦೨೦೮೨೬, ೮೧೨೩೩೧೨೩೧೯ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.