ಸುಂಟಿಕೊಪ್ಪ, ಸೆ. ೨೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಾನ್ಬೈಲ್ ಒಕ್ಕೂಟ, ಶ್ರೀ ತಲಕಾವೇರಿ ಜ್ಞಾನ ವಿಕಾಸ ಕೇಂದ್ರ ಹಾಗೂ ಸೇವಾ ಭಾರತಿ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಾನ್ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಆರೋಗ್ಯ ತಪಾಸಣಾ ಶಿಬಿರದಲ್ಲಿ ಸ್ತಿçÃರೋಗ, ತಜ್ಞರು, ಮಧುಮೇಹ, ರಕ್ತದೊತ್ತಡ, ವಿವಿಧ ಕಾಯಿಲೆಗಳಿಗೆ ಸಂಬAಧಿಸಿದ ನುರಿತ ತಜ್ಞರುಗಳಿಂದ ತಪಾಸಣೆ ನಡೆಸಿ ಜೌಷಧಿಗಳನ್ನು ನೀಡಿದರು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಸದುಪಯೋಗವನ್ನು ಪಡಿಸಿಕೊಂಡರು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾನ್ಬೈಲ್ ಒಕ್ಕೂಟ ಹಾಗೂ ಶ್ರೀ ತಲಕಾವೇರಿ ಜ್ಞಾನ ವಿಕಾಸ ಕೇಂದ್ರ ಪದಾಧಿಕಾರಿಗಳು ಹಾಗೂ ಸೇವಾ ಪ್ರತಿನಿಧಿ ಯಶೋಧ ಉಪಸ್ಥಿತರಿದ್ದರು.