ಕುಶಾಲನಗರ, ಸೆ. ೨೮: ಕುಶಾಲ ನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಬೆಳ್ಳಿ ಹಬ್ಬ ಮಹೋತ್ಸವದಲ್ಲಿ ಸಾಧಕರಿಗೆ ಸನ್ಮಾನಿಸಿ ಗೌರವಿಸ ಲಾಯಿತು. ಹಿರಿಯ ಪತ್ರಿಕಾ ವಿತರಕ ವಿ.ಪಿ. ಪ್ರಕಾಶ್, ವೈದ್ಯ ಡಾ. ಕಿಶೋರ್ಕುಮಾರ್, ಕುಶಾಲನಗರ ಪಟ್ಟಣ ಪಂಚಾಯಿತಿ ಧಫೇದಾರ್ ಮೋಹನ್ ಕುಮಾರ್, ಸಮಾಜ ಸೇವಕ ಮುನೀರ್, ಮಹಿಳಾ ಭಜನಾ ಮಂಡಳಿಯ ಪದ್ಮ ಪುರುಷೋತ್ತಮ್, ಪತ್ರಕರ್ತ ದಿ. ನೋಬು ಅವರ ಪತ್ನಿ ಮೇರಿ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಮಡಿಕೇರಿ ಕ್ಷೇತ್ರ ಶಾಸಕ ಮಂತರ್ ಗೌಡ, ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕೊಡಗು ಜಿಲ್ಲಾಧ್ಯಕ್ಷೆ ಸವಿತಾ ರೈ ಮತ್ತಿತರರು ಇದ್ದರು.