ಸಂಪಾಜೆ, ಸೆ. ೨೯: ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ವತಿಯಿಂದ ಕೊಡಗು ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ೨೦೨೨-೨೩ನೇ ಸಾಲಿನ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ದೊರೆತಿದೆ. ಕೊಡಗು ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರೂ, ಅಪೆಕ್ಸ್ ಬ್ಯಾಂಕ್ ನಿರ್ದೇಶಕರೂ ಆದ ಕೊಡಂದೇರ ಬಾಂಡ್ ಗಣಪತಿ ಅವರು ಸಂಘದ ಅಧ್ಯಕ್ಷ ಅನಂತ್ ಊರುಬೈಲು ಅವರಿಗೆ ಪ್ರಶಸ್ತಿಯ ಪ್ರಮಾಣಪತ್ರ ಮತ್ತು ಚೆಕ್‌ಅನ್ನು ಪ್ರದಾನ ಮಾಡಿದರು. ಈ ಸಂದರ್ಭ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಕೆ. ಆನಂದ, ನಿರ್ದೇಶಕರಾದ ಯಶವಂತ ಡಿ.ಡಿ., ಕಿಶನ್ ಪಿ.ಪಿ. ಉಪಸ್ಥಿತರಿದ್ದರು.