ಮಡಿಕೇರಿ, ಸೆ. ೩೦: ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸುವ ಸಂಬAಧ ೨೦೨೪-೨೫ನೇ ಸಾಲಿನಲ್ಲಿ ವೃತ್ತಿ ತರಬೇತಿಗೆ ಪರಿಶಿಷ್ಟ ವರ್ಗದ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸ ಲಾಗಿದ್ದು, ೨೦೨೪-೨೫ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಕಾನೂನು ಪದವೀಧ ರರಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ ೭ ರವರೆಗೆ ಅವಧಿ ವಿಸ್ತರಿಸ ಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪರಿಶಿಷ್ಟ ಪಂಗಡ ಜಾತಿಗೆ ಸೇರಿದ್ದು, ಕೊಡಗು ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಗಳು ೪೦ ವರ್ಷ ವಯೋಮಿತಿ ಯೊಳಗಿರಬೇಕು. ಅಭ್ಯರ್ಥಿಯ ಮತ್ತು ಪೋಷಕರ ವಾರ್ಷಿಕ ಆದಾಯ ರೂ. ೨.೫೦ ಲಕ್ಷ ಮೀರಿರಬಾರದು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮೊದಲು ಯಾವುದೇ ಪದವಿ ನಂತರ ೩ ವರ್ಷಗಳ ಅಥವಾ ಪಿಯುಸಿ ನಂತರ ೫ ವರ್ಷಗಳ ಕೋರ್ಸುಗಳ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ೧೫ ವರ್ಷಕ್ಕೆ ಕಡಿಮೆಯಿಲ್ಲದಂತೆ ಸೇವೆ ಸಲ್ಲಿಸಿರುವ ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್/ ಸರ್ಕಾರಿ ವಕೀಲರು-ವೃತ್ತಿಪರ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು. ತರಬೇತಿ ಅವಧಿಯು ೨ ವರ್ಷಗಳಾಗಿದ್ದು, ಮಾಸಿಕ ರೂ. ೧೦ ಸಾವಿರ ಶಿಷ್ಯವೇತನವನ್ನು ನೀಡಲಾಗುವುದು. ಅರ್ಜಿಯನ್ನು ಆನ್‌ಲೈನ್ ಮೂಲಕ ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ನಲ್ಲಿ ತಾ. ೭ ರೊಳಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗೆ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ೦೮೨೭೨-೨೦೦೫೦೦. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ, ವೀರಾಜ ಪೇಟೆ ಅವರನ್ನು ಸಂಪರ್ಕಿಸಬಹುದೆAದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್. ಹೊನ್ನೆಗೌಡ ತಿಳಿಸಿದ್ದಾರೆ.