ಸೋಮವಾರಪೇಟೆ, ಸೆ. ೨೯: ಭಾರತೀಯ ಜನತಾ ಪಾರ್ಟಿಯ ಮಂಡಲ ಯುವ ಮೋರ್ಚಾ ವತಿಯಿಂದ ತಾ.೩೦ರಂದು (ಇಂದು) ಮಹಾತ್ಮಾ ಗಾಂಧಿ, ದೀನ್ ದಯಾಳ್ ಉಪಾಧ್ಯಾಯ ಹಾಗೂ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ, ಸೇವಾ ಪಾಕ್ಷಿಕದ ಅಂಗವಾಗಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಮಂಡಲ ಯುವ ಮೋರ್ಚಾ ಅಧ್ಯಕ್ಷ ಮೋಹಿತ್ ತಿಮ್ಮಯ್ಯ ತಿಳಿಸಿದ್ದಾರೆ.
ತಾ.೩೦ ರಂದು ಬೆಳಿಗ್ಗೆ ೧೦.೩೦ಕ್ಕೆ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಿಬಿರ ನಡೆಯಲಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಿ ರಕ್ತದಾನ ಮಾಡಲಿದ್ದಾರೆ. ಆಸಕ್ತರು ಶಿಬಿರದಲ್ಲಿ ಭಾಗಿಯಾಗಿ ರಕ್ತದಾನ ಮಾಡಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.