x
ಕೂಡಿಗೆ, ಸೆ. ೨೯: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯ ಆವರಣದಲ್ಲಿ ನವರಾತ್ರಿಯ ಅಂಗವಾಗಿ ಅ. ೩ ರಿಂದ ೧೧ g ವರೆಗೆ ನವರಾತ್ರಿ ಪೂಜೋತ್ಸವ ಕಾರ್ಯಕ್ರಮಗಳು ನಡೆಯಲಿವೆ.
ದೇವಾಲಯ ಆವರಣದಲ್ಲಿ ನವರಾತ್ರಿ ಅಂಗವಾಗಿ ಪ್ರತಿ ದಿನ ದೇವಿಯ ಸನ್ನಿಧಿಯಲ್ಲಿ ಭಕ್ತ ವೃಂದದ ಮೂಲಕ ಶ್ರೀ ಲಲಿತಾ ಸಹಸ್ರನಾಮ ಪಾರಾಯಣದೊಂದಿಗೆ ಕುಂಕುಮಾರ್ಚನೆ ನಡೆಯಲಿದೆ ಎಂದು ದೇವಾಲಯ ಸಮಿತಿಯ ಅಧ್ಯಕ್ಷ ಟಿ.ಎಂ.ಚಾಮಿ ತಿಳಿಸಿದ್ದಾರೆ.