*ಸಿದ್ದಾಪುರ, ಸೆ. ೨೯: ಸಿದ್ದಾಪುರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಬಿ.ಜಿ.ಎಸ್. ಪಬ್ಲಿಕ್ ಸ್ಕೂಲ್ನಲ್ಲಿ “ಶಿಕ್ಷಕರ ದಿನಾಚರಣೆ ಸಂಭ್ರಮ” ಕಾರ್ಯಕ್ರಮ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತಾಧಿಕಾರಿ ಸುಧಾಕರ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕೂಡಿಗೆ ಡಯಟ್ನ ಉಪನ್ಯಾಸಕಿ ಗೀತಾ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ರಾಜೇಶ್ ಆಗಮಿಸಿದ್ದರು.
ಶಿಕ್ಷಕರ ಮಹತ್ವದ ಕುರಿತು ಗೀತಾ ಅವರು ಸವಿಸ್ತಾರವಾಗಿ ತಿಳಿಸಿ ಕೊಟ್ಟರು. ವಿದ್ಯಾರ್ಥಿಗಳು ಶಿಕ್ಷಕರಿಗೆ ಮನರಂಜನಾ ಕ್ರೀಡಾಕೂಟವನ್ನು ಆಯೋಜಿಸಿ, ವಿಜೇತ ಶಿಕ್ಷಕರಿಗೆ ಬಹುಮಾನವನ್ನು ವಿತರಿಸಿದರು. ರಾಜೇಶ್ ಅವರು ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಅವಿನಾಭಾವ ಸಂಬAಧದ ಬಗ್ಗೆ ವಿವರಿಸಿದರು.
ಸಂಸ್ಥೆಯ ವತಿಯಿಂದ ಶಿಕ್ಷಕವೃಂದ, ಬೋಧಕವೃಂದ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಗೌರವ ಸಮರ್ಪಣೆಯೊಂದಿಗೆ ಉಡುಗೊರೆಯನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಕಾಳೇಗೌಡ ಹಾಗೂ ವ್ಯವಸ್ಥಾಪಕ ಮಂಜುನಾಥ್ ಹಾಜರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ನಿರೂಪಣೆ, ಸ್ವಾಗತ ಭಾಷಣ, ಬಹುಮಾನ ವಿತರಣೆ ಮತ್ತು ವಂದನಾರ್ಪಣೆಯನ್ನು ಕ್ರಮವಾಗಿ ಸಂಸ್ಥೆಯ ವಿದ್ಯಾರ್ಥಿಗಳಾದ ನವಮಿ ಶ್ರೀಷ್ಣಾ, ದಿನಿತ್, ಸಂಜಯ್ ಹಾಗೂ ಪ್ರಾರ್ಥನಾ ನೆರವೇರಿಸಿದರು.