ಕಾಜೂರು
ಐಗೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಜೂರಿನಲ್ಲಿ ಅಜೀಂ ಫೌಂಡೇಶನ್ ವತಿಯಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ನಾಲ್ಕು ದಿನಗಳ ಕಾಲ ಮೊಟ್ಟೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ದೊರಕಿತು.
ಈ ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷರಾದ ಚಂದ್ರಶೇಖರ್, ಎಸ್ಡಿಎಂಸಿ ಸದಸ್ಯರು, ಶಾಲಾ ಮುಖ್ಯ ಶಿಕ್ಷಕಿ ಸರಳಕುಮಾರಿ, ದೈಹಿಕ ಶಿಕ್ಷಣ ಶಿಕ್ಷಕ ಅಜಿತ್ ಕುಮಾರ್, ಶಿಕ್ಷಕಿಯರಾದ ಅನಸೂಯ, ಇಂದಿರಾ, ಸ್ವರ್ಣ ಮತ್ತು ಅಕ್ಷರ ದಾಸೋಹ ಸಿಬ್ಬಂದಿಗಳು ಹಾಜರಿದ್ದರು.
ಕೂಡಿಗೆ
ಕೂಡಿಗೆ: ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಅಕ್ಷರ ದಾಸೋಹ ಯೋಜನೆಯಡಿ ಅಜಿಂ ಪ್ರೇಮ್ಜಿ ಫೌಂಡೇಶನ್ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ೪ ದಿನಗಳಿಗೆ ಹೆಚ್ಚುವರಿಯಾಗಿ ನೀಡಲಾಗುತ್ತಿರುವ ಉಚಿತ ಮೊಟ್ಟೆಯನ್ನು ಡಿ.ಎಂ.ಸಿ. ಅಧ್ಯಕ್ಷ ಎ.ಎಂ. ಜವರಯ್ಯ ವಿತರಿಸಿದರು.
ಈ ಸಂದರ್ಭ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್, ಶಿಕ್ಷಕರ ವೃಂದ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಚೆಯ್ಯAಡಾಣೆ
ಚೆಯ್ಯAಡಾಣೆ: ವಿದ್ಯಾರ್ಥಿಗಳ ಪೌಷ್ಟಿಕತೆಯ ದೃಷ್ಟಿಯಿಂದ ಸರಕಾರವು ಮಧ್ಯಾಹ್ನದ ಬಿಸಿಯೂಟದೊಂದಿಗೆ ವಾರಕ್ಕೆ ಎರಡು ದಿನ ಮೊಟ್ಟೆಯನ್ನು ವಿತರಿಸುವ ಯೋಜನೆ ಕೈಗೊಂಡ ಹಿನ್ನೆಲೆ ಅಜೀಂ ಪ್ರೇಮ್ಜಿ ರವರ ಫೌಂಡೇಶನ್ ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಾರಕ್ಕೆ ೪ ದಿನಗಳು ಬಿಸಿಯೂಟದೊಂದಿಗೆ ಮೊಟ್ಟೆಯನ್ನು ನೀಡಲು ನಿರ್ಧರಿಸಿದೆ.
ಇದರ ಭಾಗವಾಗಿ ಚೆಯ್ಯಂಡಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೊಟ್ಟೆಯನ್ನು ನೀಡಲಾಯಿತು.