ಮುಳ್ಳೂರು, ಸೆ. ೩೦: ಸಮೀಪದ ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟಿçÃಯ ಸೇವಾ ಯೋಜನೆ ದಿನಾಚರಣೆ ಮತ್ತು ದಿನದ ಅಂಗವಾಗಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಕೊಡ್ಲಿಪೇಟೆ ಗ್ರಾ.ಪಂ. ಅಧ್ಯಕ್ಷೆ ಗೀತ ತ್ಯಾಗರಾಜ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು-ಪ್ರತಿಯೊಬ್ಬ ನಾಗರಿಕನೂ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು, ಸ್ವಚ್ಛತೆಯನ್ನು ಕಾಪಾಡಿಕೊಂಡರೆ ಪರಿಸರವು ಸ್ವಚ್ಛಗೊಳ್ಳುತ್ತದೆ, ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಸ್ವಚ್ಛತಾ ಹೀ ಸೇವಾ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಅಭಿಯಾನದ ಮೂಲಕ ಸ್ವಚ್ಛತೆ ಬಗ್ಗೆ ಸಾರ್ವಜನಿಕರನ್ನು ಜಾಗೃತಿಗೊಳಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿದ್ಯಾಸಂಸ್ಥೆ ಕಾರ್ಯದರ್ಶಿ ಕೆ.ಎಸ್. ಪರಮೇಶ್, ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಸಲುವಾಗಿ ಸಂಕಲ್ಪ ಮಾಡಿದರೆ ಮಾತ್ರ ಪರಿಸರವು ಸ್ವಚ್ಛತೆಯಿಂದ ಕೂಡಿರುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ನಿರ್ದೇಶಕ ಬಿ.ಕೆ.ಯತೀಶ್, ಕಾಲೇಜಿನ ಪ್ರಾಂಶುಪಾಲ ಎಂ.ಆರ್.ನಿರAಜನ್, ರಾಷ್ಟಿçÃಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿ ಕೆ.ಎಚ್. ಯೋಗೇಂದ್ರ, ಸಹಾಯಕ ಅಧಿಕಾರಿ ಸಿ.ಶ್ರೇಯ ಮತ್ತು ಉಪನ್ಯಾಸಕರು ಹಾಗೂ ಸ್ವಯಂ ಸೇವಕರು ಹಾಜರಿದ್ದರು. ಈ ಸಂದರ್ಭ ಸ್ವಚ್ಛತಾ ಹೀ ಸೇವಾ ಸಂಕಲ್ಪ ಪ್ರಯುಕ್ತ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ರಾಷ್ಟಿçÃಯ ಸೇವಾ ಯೋಜನೆ ದಿನಚಾರಣೆ ಅಂಗವಾಗಿ ವಿದ್ಯಾರ್ಥಿಗಳು ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತಮುತ್ತ ಶ್ರಮದಾನದ ಮೂಲಕ ಸ್ವಚ್ಚಗೊಳಿಸಿದರು.