ವೀರಾಜಪೇಟೆ, ಸೆ. ೨೯: ವ್ಯಾಯಾಮ, ಮಿತ ಆಹಾರ ಸೇವನೆಯೊಂದಿಗೆ ಪ್ರತಿಯೊಬ್ಬರು ಆರೋಗ್ಯ ತಪಾಸಣೆ ಮಾಡುವುದು ಅತ್ಯಗತ್ಯ ಎಂದು ಆರ್.ಐ.ಹೆಚ್.ಪಿ ಆಸ್ಪತ್ರೆಯ ಸರ್ಜನ್ ಡಾ. ಸಿ.ಕೆ.ಎನ್. ಚಂದ್ರು ಸಲಹೆ ನೀಡಿದರು.

ಅಮ್ಮತ್ತಿಯ ಆರ್.ಐ.ಹೆಚ್.ಪಿ. ಆಸ್ಪತ್ರೆ, ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೆದಮುಳ್ಳೂರು ಗ್ರಾ.ಪಂ. ಸಂಯುಕ್ತ ಆಶ್ರಯದಲ್ಲಿ ಗುಂಡಿಕೆರೆ ಶಾಫಿ ಜಮಾಅತ್ ಮದ್ರಸಾ ಸಭಾಂಗಣದಲ್ಲಿ ಸಾರ್ವಜನಿಕರಿಗೆ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಅನಾರೋಗ್ಯ ಗಳು ಹೆಚ್ಚಾಗುತ್ತಿದ್ದು, ಆರೋಗ್ಯವನ್ನು ಕಾಪಾಡುವಲ್ಲಿ ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ತಪಾಸಣೆ ಮಾಡುವುದು ಅಗತ್ಯ ಎಂದರು.

ಕೆ.ಡಿ.ಪಿ. ಸದಸ್ಯ ಮಾಳೇಟಿರ ಪ್ರಶಾಂತ್ ಉತ್ತಪ್ಪ ಮಾತನಾಡಿ, ಹಿಂದಿನ ಕಾಲದಲ್ಲಿ ರಾಸಾಯನಿಕ ರಹಿತ ಆಹಾರ ಸೇವನೆ ಮೂಲಕ ಆರೋಗ್ಯವನ್ನು ಕಾಪಾಡುತ್ತಿದ್ದರು. ಇತ್ತೀಚೆಗೆ ಯಾಂತ್ರಿಕ ಕೆಲಸಗಳು ಹೆಚ್ಚಾಗುತ್ತಿದ್ದಂತೆ ಮಾನವನ ರೋಗಗಳು ಹೆಚ್ಚುತ್ತಿವೆ. ಆಗಿಂದ್ದಾಗೆ ಆರೋಗ್ಯ ತಪಾಸಣೆ ಮಾಡಿಸಿ ಕೊಂಡು ಆರೋಗ್ಯವನ್ನು ಕಾಪಾಡಬೇಕು ಎಂದರು.

ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್ ಕುಮಾರ್ ಗುಹ್ಯ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಆರೋಗ್ಯ ತಪಾಸಣೆ ನಡೆಸುವುದರಿಂದ ಬಡತನದಲ್ಲಿರು ವವರಿಗೆ ಉಪಯೋಗವಾಗಲಿದೆ ಎಂಬ ನಿಟ್ಟಿನಲ್ಲಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಆರ್.ಐ.ಹೆಚ್.ಪಿ. ಆಸ್ಪತ್ರೆಯ ನುರಿತ ವೈದ್ಯರು ತಪಾಸಣೆ ನಡೆಸಿ, ಔಷಧಿಯನ್ನು ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಗ್ರಾ.ಪಂ. ಸದಸ್ಯ ಎಂ.ಎA. ಇಸ್ಮಾಯಿಲ್ ಮಾತನಾಡಿ, ಪಟ್ಟಣ ದಿಂದ ದೂರವಿರುವ ಗುಂಡಿಕೆರೆ ವ್ಯಾಪ್ತಿಯಲ್ಲಿ ಶಿಬಿರ ಆಯೋಜಿಸಿ ರುವುದರಿಂದ ಸ್ಥಳೀಯರಿಗೆ ಹೆಚ್ಚು ಉಪಯೋಗವಾಗಿದೆ. ಆರೋಗ್ಯವೇ ಪ್ರಮುಖವಾಗಿದ್ದು, ಎಲ್ಲರೂ ಆರೋಗ್ಯದ ಕಡೆ ಗಮನ ಹರಿಸಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆದಮುಳ್ಳೂರು ಗ್ರಾ.ಪಂ. ಅಧ್ಯಕ್ಷ ಮಾಳೇಟಿರ ಜಫ್ರಿ ಉತ್ತಪ್ಪ, ಗ್ರಾ.ಪಂ. ವ್ಯಾಪ್ತಿಯಲ್ಲಿ ಆರೋಗ್ಯ ಶಿಬಿರ ಹಮ್ಮಿಕೊಂಡಿರು ವುದು ಶ್ಲಾಘನೀಯ.

ಗ್ರಾಮೀಣ ಭಾಗದ ಜನರು ಶಿಬಿರದ ಸದುಪಯೋಗವನ್ನು ಪಡೆದು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು.

ಈ ಸಂದರ್ಭ ಗ್ರಾ.ಪಂ. ಸದಸ್ಯೆ ಹೆಚ್.ಆರ್. ವನಿತ, ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸೀತಾ, ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಪುತ್ತಂ ಪ್ರದೀಪ್, ಕಿಶೋರ್ ಕುಮಾರ್ ಶೆಟ್ಟಿ, ರವಿಕುಮಾರ್ ಹಾಜರಿದ್ದರು.

ಶಿಬಿರದಲ್ಲಿ ಆರ್.ಐ.ಹೆಚ್.ಪಿ. ಆಸ್ಪತ್ರೆಯ ಸ್ತಿçÃರೋಗ ತಜ್ಞೆ ಡಾ. ನಿಶ್ಚಲ ಎಸ್., ಮಕ್ಕಳ ತಜ್ಞ ಡಾ. ಕೃಷ್ಣಪ್ರಸಾದ್, ಜನರಲ್ ಸರ್ಜನ್ ಡಾ. ಚಂದ್ರು, ಆಡಳಿತ ಅಧಿಕಾರಿ ಡಾ. ಶುಭ ಆರೋಗ್ಯ ತಪಾಸಣೆ ಮಾಡಿದರು. ಗುಂಡಿಕೆರೆ ಗ್ರಾಮದ ನೂರಾರು ಮಂದಿ ಸಾರ್ವಜನಿಕರು ಶಿಬಿರದಲ್ಲಿ ಪಾಲ್ಗೊಂಡರು.

ಕಿಶೋರ್ ಕುಮಾರ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.