ಮಡಿಕೇರಿ, ಸೆ. ೩೦: ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮಡಿಕೇರಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ಹೊದವಾಡದ ರಾಫೆಲ್ಸ್ ಇಂಟರ್ ನ್ಯಾಷನಲ್ ಪಿಯು ಕಾಲೇಜಿನ ಬಾಲಕರ ತಂಡವು ಚಾಂಪಿಯನ್ ಪ್ರಶಸ್ತಿಯನ್ನು ಅಲಂಕರಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಫೈನಲ್ ಪಂದ್ಯದಲ್ಲಿ ಮಡಿಕೇರಿಯ ಸಂತ ಮೈಕಲರ ಪಿಯು ಕಾಲೇಜು ತಂಡವನ್ನು ೨-೦ ನೇರ ಸೆಟ್‌ಗಳಿಂದ ಮಣಿಸಿ ರಾಫೆಲ್ಸ್ ಪಿಯು ಕಾಲೇಜು ತಂಡವು ಪ್ರಶಸ್ತಿ ಗೆದ್ದುಕೊಂಡಿತು.

ಸೆಮಿಫೈನಲ್ ಪಂದ್ಯದಲ್ಲಿ ಆತಿಥೇಯ ಕಾವೇರಿ ಕಾಲೇಜು ತಂಡವನ್ನು ೨-೧ ಸೆಟ್‌ಗಳ ಅಂತರದಿAದ ಸೋಲಿಸಿತು.

ವಿಜೇತರಿಗೆ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ರಾಫೆಲ್ಸ್ ಇಂಟರ್ನ್ಯಾಷನಲ್ ಪಿಯು ಕಾಲೇಜಿನ ಉಪನ್ಯಾಸಕರಾದ ಹುಸೈನ್, ತರಬೇತುದಾರ ಇಸ್ಮಾಯಿಲ್ ಕಂಡಕರೆ ಹಾಜರಿದ್ದರು.