ವೀರಾಜಪೇಟೆ, ಸೆ. ೨೯: ಪಟ್ಟಣದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಎನ್ಎಸ್ಎಸ್ ದಿವಸದ ಪ್ರಯುಕ್ತ ವೀರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸಿದರು.
ಸ್ವಚ್ಛತಾ ಹೀ ಸೇವಾ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಈ ಶ್ರಮದಾನ ಕಾರ್ಯಕ್ರಮವು ಜರುಗಿತು. ವೀರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರು ಹಾಗೂ ಸೆಂಟ್ ಆ್ಯನ್ಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಮದಲೈ ಮುತ್ತು ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ಸಮಾಜದ ಒಳಿತು ರಾಷ್ಟಿçÃಯ ಸೇವಾ ಯೋಜನೆಯ ಉದ್ದೇಶವಾಗಿದ್ದು ವಿದ್ಯಾರ್ಥಿಗಳು ಸಮಾಜದ ಹಾಗೂ ರಾಷ್ಟçದ ಅಭಿವೃದ್ಧಿಗೆ ನಿಸ್ವಾರ್ಥವಾಗಿ ಸೇವೆಯನ್ನು ಸಲ್ಲಿಸಬೇಕು ಎಂದರು.
ವೀರಾಜಪೇಟೆ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು ಹಾಗೂ ಶಸ್ತç ಚಿಕಿತ್ಸಕರಾದ ಡಾ. ವಿಶ್ವನಾಥ್ ಸಿಂಪಿ ರವರು ಮಾತನಾಡಿ, ಸ್ವಚ್ಛತಾ ಅಭಿಯಾನವು ಎನ್.ಎಸ್.ಎಸ್.ನ ಧ್ಯೇಯವಾಗಿದ್ದು ವಿದ್ಯಾರ್ಥಿಗಳು ತಮ್ಮ ಸೇವೆಯನ್ನು ಸಮಾಜಕ್ಕೆ ಸಲ್ಲಿಸು ತ್ತಿರುವುದು ಗಮನಾರ್ಹವಾಗಿದೆ. ಸೇವಾ ಮನೋಭಾವನೆಯನ್ನು ಬೆಳೆಸುವುದರ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೆ ರಾಷ್ಟಿçÃಯ ಸೇವಾ ಯೋಜನೆ ಸಹಕಾರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಹೇಮ, ಸಾರ್ವಜನಿಕ ಆಸ್ಪತ್ರೆಯ ಸಹಾಯಕ ಆಡಳಿತಾಧಿಕಾರಿ ಮಹೇಶ್, ಕಚೇರಿ ಸಿಬ್ಬಂದಿಗಳಾದ ಇಂದುಲೇಖ, ಹಿರಿಯ ಶುಶ್ರೂಷಕಿ ಸುಲೋಚನಾ, ಉಪನ್ಯಾಸಕರಾದ ಅರ್ಜುನ್, ವಿಲೀನ, ಶಶಿಕಲಾ,ಆಸ್ಪತ್ರೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಅಧಿಕಾರಿ ಹಾಗೂ ಉಪನ್ಯಾಸಕರಾದ ಶಾಂತಿಭೂಷಣ್ ಸ್ವಾಗತಿಸಿ, ನಿರೂಪಿಸಿದರು.
ಎನ್. ಎಸ್. ಎಸ್. ವಿದ್ಯಾರ್ಥಿ ಗಳು ಆಸ್ಪತ್ರೆಯ ಆವರಣದಲ್ಲಿ ಶ್ರಮದಾನವನ್ನು ಮಾಡಿ ಬೆಳೆದಿದ್ದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಛ ಮಾಡಿದರು.
ಪ್ಲಾಸ್ಟಿಕ್, ಪೇಪರ್ಗಳನ್ನು ತೆಗೆದು ಸ್ವಚ್ಛತಾ ಅಭಿಯಾನ ನಡೆಸಿದರು. ತದನಂತರ ಆಸ್ಪತ್ರೆಯ ಮುಂಭಾಗದ ಹೂದೋಟದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಿದರು.