ಶನಿವಾರಸಂತೆ, ಸೆ. ೩೦: ಮೈಸೂರಿನ ಕಲಾಮಂದಿರದ ಆವರಣದಲ್ಲಿರುವ ಕಿರುರಂಗಮAದಿರದಲ್ಲಿ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ೧೩ನೇ ವಾರ್ಷಿಕೋತ್ಸವ ಹಾಗೂ ಹಿಂದುಳಿದ ವರ್ಗದವರಿಗೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಾಡಿದ ಮೀಸಲಾತಿಯ ೧೦೫ರ ಸಂಭ್ರಮಾಚರಣೆ ಸಮಾರಂಭದಲ್ಲಿ ಜಿಲ್ಲೆಯ ಸಾಹಿತಿ ಹಾಗೂ ಪತ್ರಕರ್ತೆ ಶ.ಗ. ನಯನತಾರಾ ಅವರಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಸೇವೆಯನ್ನು ಗುರುತಿಸಿ, ಸಾಧಕ ಮಹಿಳೆಯರಿಗೆ ನೀಡಲಾಗುವ ಯಶೋಧರಮ್ಮ ದಾಸಪ್ಪ ಪ್ರಶಸ್ತಿ ಫಲಕವನ್ನು ವೇದಿಕೆ ರಾಜ್ಯಾಧ್ಯಕ್ಷೆ ಹೆಚ್.ಎಲ್. ಯಮುನಾ, ಗೌರವಾಧ್ಯಕ್ಷ ಹೆಚ್.ಕೆ. ರಾಮು, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಮಡ್ಡಿಕೆರೆ ಗೋಪಾಲ್, ಇತರ ಗಣ್ಯರು ಪ್ರದಾನ ಮಾಡಿ, ಸನ್ಮಾನಿಸಿ ಗೌರವಿಸಿದರು.