ಕುಶಾಲನಗರ, ಅ. ೧: ಕುಶಾಲನಗರದಲ್ಲಿ ನಡೆದ ಹೋಬಳಿ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಸಮಾರಂಭದಲ್ಲಿ ಹಿರಿಯ ನಾಗರಿಕರಾದ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರು, ಹಿರಿಯ ಸಾಹಿತಿಗಳು ಆದ ಬಾಚರಣಿಯಂಡ ಪಿ. ಅಪ್ಪಣ್ಣ ಮತ್ತು ನಿವೃತ್ತ ಶಿಕ್ಷಕ ಎಂ.ಹೆಚ್. ನಜೀರ್ ಅಹ್ಮದ್ ಅವರು ಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಮಡಿಕೇರಿ ಕ್ಷೇತ್ರ ಶಾಸಕ ಡಾ. ಮಂತರ್ ಗೌಡ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಶಕ್ತಿ ಪತ್ರಿಕೆ ಪ್ರಧಾನ ಸಂಪಾದಕರಾದ ಜಿ. ರಾಜೇಂದ್ರ, ಸಂಘದ ಜಿಲ್ಲಾ ಅಧ್ಯಕ್ಷೆ ಸವಿತಾ ರೈ, ರಾಷ್ಟಿçÃಯ ಸಮಿತಿ ಸದಸ್ಯ ಸುನಿಲ್ ಪೊನ್ನೇಟಿ, ತಾಲೂಕು ಘಟಕದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಕಾರ್ಯದರ್ಶಿ ನಾಗರಾಜ ಶೆಟ್ಟಿ, ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಕೊಡಗು ವಿವಿ ಪ್ರಾಧ್ಯಾಪಕ ಜಮೀರ್ ಅಹಮದ್, ಮತ್ತಿತರರು ಇದ್ದರು.