ಮಡಿಕೇರಿ, ಅ. ೧: ರಾಷ್ಟçಪಿತ, ಮಹಾತ್ಮ ಗಾಂಧೀಜಿಯವರ ೧೫೫ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿಭಾಗಗಳಿಗೆ ಪ್ರತ್ಯೇಕವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ.

ಪ್ರೌಢ ಶಾಲಾ ವಿಭಾಗ: ವೀರಾಜಪೇಟೆ ಸಂತ ಅನ್ನಮ್ಮ ಪ್ರೌಢ ಶಾಲೆಯ ೧೦ನೇ ತರಗತಿಯ ಚೈತನ್ಯ ಕೆ.ಎಂ. (ಪ್ರಥಮ), ಕುಶಾಲನಗರ ಫಾತಿಮಾ ಕಾನ್ವೆಂಟ್ ೧೦ನೇ ತರಗತಿಯ ಭಾರ್ಗವಿ ಕೆ.(ದ್ವಿತೀಯ), ಹಾಕತ್ತೂರು ಸರ್ಕಾರಿ ಪ್ರೌಢ ಶಾಲೆಯ ೧೦ನೇ ತರಗತಿಯ ಕಲ್ಪನಾ ಕೆ.ವಿ. (ತೃತೀಯ) ಸ್ಥಾನ ಪಡೆದಿದ್ದಾರೆ.

ಪದವಿ ಪೂರ್ವ ವಿಭಾಗ: ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ ಸಹನ ಎಂ.ಎಸ್. (ಪ್ರಥಮ), ಸೋಮವಾರಪೇಟೆ ಸಂತ ಜೋಸೆಫ್ ಪಿ.ಯು. ಕಾಲೇಜಿನ ದ್ವಿತೀಯ ಪಿ.ಯು.ಸಿ.ಯ ನೀತಾ ಕೆ.ಆರ್. (ದ್ವಿತೀಯ), ಗೋಣಿಕೊಪ್ಪ ವಿದ್ಯಾನಿಕೇತನ ಪಿ.ಯು. ಕಾಲೇಜಿನ ಡಿ. ವೈಷ್ಣವಿ ತಮ್ಮನ್ಕರ್(ತೃತೀಯ) ಸ್ಥಾನ ಪಡೆದಿದ್ದಾರೆ.

ಪದವಿ/ಸ್ನಾತಕೋತ್ತರ ವಿಭಾಗ: ವೀರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಎ. ಕೀರ್ತನ (ಪ್ರಥಮ), ಕೊಡ್ಲಿಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಸಿಎ ಜುಲೈಕಾ ನಾಫಿಯಾ (ದ್ವಿತೀಯ) ಹಾಗೂ ವೀರಾಜಪೇಟೆ ಕಾವೇರಿ ಕಾಲೇಜಿನ ದ್ವಿತೀಯ ಬಿಬಿಎ ಸುಷ್ಮಿತಾ ಕೆ.ಎಸ್. (ತೃತೀಯ) ಸ್ಥಾನ ಪಡೆದಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಕ್ರಮವಾಗಿ ರೂ. ೩ ಸಾವಿರ, ರೂ. ೨ ಸಾವಿರ ಹಾಗೂ ರೂ. ೧ ಸಾವಿರ ನಗದು ಪುರಸ್ಕಾರ ಹಾಗೂ ಪ್ರಮಾಣ ಪತ್ರವನ್ನು ತಾ. ೨ ರಂದು ನಗರದ ಗಾಂಧಿ ಭವನದಲ್ಲಿ ನಡೆಯುವ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.