ಮಡಿಕೇರಿ, ಸೆ. ೩೦: ಕೊಡಗು ಜಿಲ್ಲೆಯ ಎಲ್ಲೆಡೆ ಪರಿಸರ ಪ್ರವಾಸೋದ್ಯಮ ನಿರ್ಮಾಣ ಮಾಡುವುದು, ಸ್ವಚ್ಛತೆಗೆ ಆದ್ಯತೆ, ಸದ್ಯದಲ್ಲಿ ಮಾರ್ಗದರ್ಶಿ ವೆಬ್‌ಸೈಟ್‌ಗೆ ಚಾಲನೆ ನೀಡುವ ಕುರಿತು ಇಂದು ಜರುಗಿದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಅವರು ಮಾಹಿತಿ ಹಾಗೂ ಸಲಹೆಯಿತ್ತರು. ಪ್ರವಾಸೋದ್ಯಮದಲ್ಲಿ ಜನಾಕರ್ಷಣೆ ಪಡೆಯುತ್ತಿರುವ ಕೊಡಗಿನಲ್ಲಿ ಪ್ರವಾಸೋದ್ಯಮದ ಬೆಳವಣಿಗೆ ಕುರಿತಾಗಿ ಕೆಲವರು ಚರ್ಚೆ- ಅಭಿಪ್ರಾಯಗಳೊಂದಿಗೆ ಕಾರ್ಯಕ್ರಮ ಆಚರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಪ್ರವಾಸೋದ್ಯಮ ಪಾಲುದಾರರ ಸಹಕಾರದಲ್ಲಿ ನಗರದ ಹೊರವಲಯದಲ್ಲಿರುವ ಆಕ್ಸಿರಿಚ್ ಹೊಟೇಲ್‌ನಲ್ಲಿ ಇಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ವೆಂಕಟ್‌ರಾಜಾ ಚಾಲನೆ ನೀಡಿದರು.

ಕೊಡಗು ಜಿಲ್ಲೆ ಪ್ರವಾಸೋದ್ಯಮ ಅಭಿವೃದ್ಧಿ ಸಂಬAಧಿಸಿದAತೆ ಪ್ರಸಿದ್ಧ ದೇವಾಲಯಗಳು, ಪವಿತ್ರ ಸ್ಥಳಗಳು, ಹೋಟೆಲ್, ಹೋಂಸ್ಟೇ, ರೆಸಾರ್ಟ್, ಜಲಾಶಯ, ಜಲಪಾತ, ಪ್ರೇಕ್ಷಣೀಯ ಸ್ಥಳಗಳು ಹೀಗೆ ವಿವಿಧ ಪ್ರವಾಸಿ ಅಂಶಗಳನ್ನು ಒಳಗೊಂಡ ವೆಬ್‌ಸೈಟ್‌ನ್ನು ಶೀಘ್ರ ಬಿಡುಗಡೆ ಮಾಡ ಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ಜಿಲ್ಲೆಯ ಪವಿತ್ರ ಸ್ಥಳವಾದ ತಲಕಾವೇರಿ, ಭಾಗಮಂಡಲ ಹಾಗೂ ಪ್ರವಾಸಿ ಸ್ಥಳವಾದ ಜಲಪಾತಗಳು, ಪ್ರೇಕ್ಷಣೀಯ ಸ್ಥಳಗಳು, ಹೋಟೆಲ್‌ಗಳು ರೆಸಾರ್ಟ್ಗಳು, ಸೇರಿದಂತೆ ಹಲವು ಸ್ಥಳಗಳ ಬಗ್ಗೆ ಮಾಹಿತಿ ನೀಡುವುದು ಅತ್ಯಗತ್ಯವಾಗಿದೆ. ಆ ನಿಟ್ಟಿನಲ್ಲಿ ಡಿಸೆಂಬರ್‌ನೊಳಗೆ ವೆಬ್‌ಸೈಟ್‌ಗೆ ಚಾಲನೆ ನೀಡಲಾಗುವುದು.

ಕೊಡಗು ಜಿಲ್ಲೆಗೆ ಹೊರ ಜಿಲ್ಲೆ ಹಾಗೂ ರಾಜ್ಯದಿಂದ ಪ್ರವಾಸಿಗರು ಆಗಮಿಸುತ್ತಾರೆ. ಅವರಿಗೆ ಸರಿಯಾದ ಮಾಹಿತಿ ನೀಡಿದಲ್ಲಿ ಅವರು ಮತ್ತೊಬ್ಬರಿಗೆ ತಿಳಿಸುತ್ತಾರೆ. ಈ ಬಗ್ಗೆ ಅಂತರ್ಜಾಲ ಮೂಲಕ ಮಾಹಿತಿ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಕೊಡಗು ಜಿಲ್ಲೆಯ ಪ್ರವಾಸಿ ಸ್ಥಳಗಳಲ್ಲಿ ಸ್ವಚ್ಛತೆ ಹಾಗೂ ಪರಿಸರ ಶುಚಿತ್ವ ಕಾಪಾಡುವ ನಿಟ್ಟಿನಲ್ಲಿ ಪ್ರವಾಸಿಗರಲ್ಲಿ ಅರಿವು ಮೂಡಿಸ ಬೇಕಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕಿದೆ. ಜಿಲ್ಲೆಯ ಎಲ್ಲೆಡೆ ಪರಿಸರ ಪ್ರವಾಸೋದ್ಯಮ ನಿರ್ಮಾಣ ಮಾಡಬೇಕು. ಪ್ಲಾಸ್ಟಿಕ್ ಬಳಸದಂತೆ ಸಲಹೆ ನೀಡಬೇಕು. ಜಿಲ್ಲೆಯ ಪವಿತ್ರ ಸ್ಥಳಗಳು ಸೇರಿದಂತೆ ಪ್ರವಾಸಿ ಸ್ಥಳಗಳಲ್ಲಿ ಯಾವ ರೀತಿ ನಡೆದುಕೊಳ್ಳಬೇಕು ಎಂಬ ಬಗ್ಗೆ ಮಾಹಿತಿ ಇರಬೇಕು. ಊಟಿ ಹಾಗೂ ತಿರುಪತಿಯಲ್ಲಿ ಪ್ರವಾಸಿ ಹಾಗೂ ಪವಿತ್ರ ಸ್ಥಳದಲ್ಲಿನ ನಿರ್ವಹಣೆ ಬಗ್ಗೆ ತಿಳಿದುಕೊಳ್ಳಬೇಕು. ಈ ಸಂಬAಧ ಆಗಾಗ ಶಿಬಿರ ಏರ್ಪಡಿಸುವ ಮೂಲಕ ಮಾಹಿತಿ ನೀಡುವಂತಾಗಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಸಮತೋಲಿತ ಪರಿಸರ ನಿರ್ಮಾಣಕ್ಕೆ ಮುಂದಾಗ ಬೇಕು. ಪ್ರವಾಸಿಗರಿಗೆ ಒಳ್ಳೆಯ ವಾತಾವರಣ ನಿರ್ಮಾಣ ಮಾಡಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿದಾಗ ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಿಸಿದರು.

ಕೊಡಗು ಜಿಲ್ಲೆಗೆ ಪ್ರವಾಸಿಗರು ಯಾವ ತಿಂಗಳಲ್ಲಿ ಭೇಟಿ ನೀಡಬೇಕು ಎಂಬ ಬಗ್ಗೆ

(ಮೊದಲ ಪುಟದಿಂದ) ವೆಬ್‌ಸೈಟ್‌ನಲ್ಲಿ ಮಾಹಿತಿ ಇರಬೇಕು. ಪ್ರವಾಸೋದ್ಯಮ ನೀತಿಯನ್ನು ಪ್ರತಿಯೊಬ್ಬರೂ ಅನುಸರಿಸಬೇಕು ಎಂದ ವೆಂಕಟ್ ರಾಜಾ, ಜಿಲ್ಲೆಯ ವಿಶೇಷತೆ ಬಗ್ಗೆ ‘ಕಾಫಿ ಟೇಬಲ್ ಬುಕ್’ ಹೊರ ತರುವಂತಾಗಬೇಕು. ಇಲ್ಲಿನ ನದಿ, ಜಲಾಶಯ, ದುಬಾರೆ ಆನೆ ಶಿಬಿರ, ರಿವರ್ ರ‍್ಯಾಪ್ಟಿಂಗ್ ಹೀಗೆ ಹಲವು ವಿಶೇಷತೆ ಬಗ್ಗೆ ಪ್ರವಾಸಿಗರಿಗೆ ಮಾಹಿತಿ ದೊರೆಯುವಂತಾಗಬೇಕು ಎಂದರು. ಪರಿಸರ ಸ್ನೇಹಿ ಪ್ರವಾಸೋದ್ಯಮದಿಂದ ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿ ಸಾಧಿಸಲು ಸಾಧ್ಯ. ಆ ನಿಟ್ಟಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರವಾಸಿ ಮಾರ್ಗದರ್ಶಿ ಪುಸ್ತಕ ಅಗತ್ಯ ಎಂದರು.

ಪರಿಸರ ಪ್ರವಾಸೋದ್ಯಮಕ್ಕೆ ಒತ್ತು

ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್ ಮಾತನಾಡಿ, ಜಿಲ್ಲೆಯಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ವಾರಾಂತ್ಯದಲ್ಲಿ ಜಿಲ್ಲೆಗೆ ೧ ಲಕ್ಷ ಜನರು ಭೇಟಿ ನೀಡುತ್ತಾರೆ. ಆದ್ದರಿಂದ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ಈ ಸಂಬAಧ ಸ್ಥಳೀಯ ಸಂಸ್ಥೆಗಳು ಹೆಚ್ಚಿನ ಗಮನಹರಿಸಬೇಕು. ತಲಕಾವೇರಿ, ಭಾಗಮಂಡಲ ಕ್ಷೇತ್ರವನ್ನು ಪವಿತ್ರ ಸ್ಥಳವೆಂದು ಪ್ರಕಟಿಸಬೇಕು, ಆ ನಿಟ್ಟಿನಲ್ಲಿ ಪ್ರವಾಸಿಗರಿಗೆ ಮಾಹಿತಿ ದೊರೆಯಬೇಕು. ಪ್ರವಾಸಿಗರ ಜೊತೆ ಸೌಜನ್ಯದಿಂದ ನಡೆದುಕೊಂಡಲ್ಲಿ ಅವರು ಮತ್ತೊಬ್ಬರಿಗೆ ಕೊಡಗಿನ ಮಹತ್ವದ ಬಗ್ಗೆ ಹೇಳುತ್ತಾರೆ. ಆ ನಿಟ್ಟಿನಲ್ಲಿ ಗಮನಹರಿಸಬೇಕು ಎಂದು ನಾಗೇಂದ್ರ ಪ್ರಸಾದ್ ಅವರು ಕೋರಿದರು. ಪವಿತ್ರ ಹಾಗೂ ಪ್ರವಾಸಿ ಸ್ಥಳಗಳಲ್ಲಿ ರಕ್ಷಕರನ್ನು ನಿಯೋಜಿಸಬೇಕು. ೧.೨೫ ಲಕ್ಷ ಜನರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಪ್ರವಾಸೋದ್ಯಮದಿಂದ ಬದುಕು ಕಟ್ಟಿಕೊಂಡಿದ್ದಾರೆ ಎಂದು ಹೇಳಿದರು. ಕೊಡಗು ಜಿಲ್ಲೆಯಲ್ಲಿ ೧.೨೫ ಲಕ್ಷ ಜನರು ಪ್ರವಾಸೋದ್ಯಮವನ್ನು ನಂಬಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಅವಲಂಬಿತರಾಗಿದ್ದಾರೆ. ಜೊತೆಗೆ ಉದ್ಯೋಗವು ಸಹ ದೊರೆಯಲಿದೆ. ಸ್ವಚ್ಛತೆ ಹಾಗೂ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು. ಸಾವಿರಾರು ಮಂದಿಗೆ ಉದ್ಯೋಗ

ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕಿ ಅನಿತಾ ಭಾಸ್ಕರ್ ಮಾತನಾಡಿ, ಕೊಡಗು ಜಿಲ್ಲೆಗೆ ಪ್ರತಿ ವರ್ಷ ಸುಮಾರು ೪೭ ರಿಂದ ೫೦ ಲಕ್ಷ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಪ್ರತ್ಯೇಕ್ಷವಾಗಿ ಹಾಗೂ ಪರೋಕ್ಷವಾಗಿ ಸಾವಿರಾರು ಮಂದಿಗೆ ಉದ್ಯೋಗವನ್ನು ಸೃಷ್ಟಿಸಿದೆ. ಜಿಲ್ಲೆಯ ಕಲೆ, ಪರಂಪರೆ ಸಂಪ್ರದಾಯಗಳ ಜೊತೆ ಇಲ್ಲಿನ ಅತಿಥ್ಯಕ್ಕೆ ಪ್ರವಾಸಿಗರು ಹೆಚ್ಚು ಆಕರ್ಷಿತಾರಾಗುತ್ತಾರೆ. ಪ್ರವಾಸೋದ್ಯಮ ಇಲಾಖೆಯ ಅನುದಾನದಿಂದ ಕೊಡಗು ಜಿಲ್ಲೆಯ ವಿವಿಧ ಪ್ರವಾಸಿ ತಾಣಗಳಿಗೆ ರೂ.೨೮೧೩.೯ ಲಕ್ಷಗಳ ಅನುದಾನದಲ್ಲಿ ವಿವಿಧ ಕಾಮಗಾರಿ ಹಾಗೂ ಮೂಲಭೂತ ಸೌಕರ್ಯ ನಿರ್ಮಿಸಲಾಗಿದೆ.

ಜಿಲ್ಲೆಯಲ್ಲಿ ಸುಮಾರು ೪ ಸಾವಿರ ಹೋಂ-ಸ್ಟೇಗಳಿದ್ದು, ಇಲ್ಲಿಯವರೆಗೆ ೨೦೧೦ ಹೋಂ-ಸ್ಟೇಗಳು ಆನ್‌ಲೈನ್‌ನಲ್ಲಿ ನೋಂದಾಯಿಸಿ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ ಸುಮಾರು ೧೫೦ ಹೋಟೆಲ್/ ರೆಸಾರ್ಟ್ಗಳು ಕಾರ್ಯ ನಿರ್ವಹಿಸುತ್ತಿದ್ದು, ೫೩ ಹೋಟೆಲ್/ ರೆಸ್ಟೋರೆಂಟ್/ ರೆಸಾರ್ಟ್ಗಳು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‌ಸೈಟ್‌ನಲ್ಲಿ ನೋಂದಾಯಿಸಿ ಪ್ರಮಾಣ ಪತ್ರವನ್ನು ಪಡೆದಿವೆ ಎಂದು ಮಾಹಿತಿ ನೀಡಿದರು.

ಪ್ರಸ್ತುತ ಸರ್ಕಾರ ೨೦೨೪-೨೫ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ಹಿನ್ನೀರಿನಲ್ಲಿ ಮತ್ತು ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು ಎಂಬುದಾಗಿ ಘೋಷಿಸಿರುತ್ತಾರೆ. ಅದರಂತೆ ಜಿಲ್ಲೆಯ ಹಾರಂಗಿ ಜಲಾಶಯದಲ್ಲಿ ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡೆಗಳನ್ನು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ನಡೆಸಲು ಅರಣ್ಯ ವಸತಿ ಮತ್ತು ವಿಹಾರಧಾಮಗಳ ಸಂಸ್ಥೆ (ಜೆಎಲ್‌ಆರ್) ನಿಗಮದ ವತಿಯಿಂದ ಪರವಾನಗಿ ನೀಡಿ ಪ್ರವಾಸಿಗರಿಗೆ ಮುಕ್ತಗೊಳಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಕುಶಾಲನಗರ ತಾಲೂಕು ದುಬಾರೆ ಹಾಗೂ ಪೊನ್ನಂಪೇಟೆ ತಾಲೂಕು ಬರಹೊಳೆ ಪ್ರವಾಸಿ ತಾಣಗಳಲ್ಲಿ ರಿವರ್ ರ‍್ಯಾಫ್ಟಿಂಗ್ ನಡೆಸಲು ಪರವಾನಿಗೆ ನೀಡಲಾಗಿರುತ್ತದೆ ಎಂದರು.

ಜಿಲ್ಲಾಧಿಕಾರಿ ಅವರು ಸುಸ್ಥಿರ ಪ್ರವಾಸೋದ್ಯಮ ಮತ್ತು ಪ್ರವಾಸೋದ್ಯಮ ಕುರಿತ ಭಿತ್ತಿಪತ್ರ ಬಿಡುಗಡೆ ಮಾಡಿದರು. ‘ಶೂನ್ಯ ತ್ಯಾಜ್ಯ ಪ್ರವಾಸ ಜಾಗೃತಿ’ಗೆ ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು.

ಹೋಂಸ್ಟೇ ಪರವಾನಗಿ ಪತ್ರವನ್ನು ಜಿಲ್ಲಾಧಿಕಾರಿ ಅವರು ವಿತರಿಸಿದರು. ಸ್ವಚ್ಛತಾ ಗ್ರೀನ್ ಲೀಪ್ ರೇಟಿಂಗ್ ಪತ್ರವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.

ಮೈಸೂರಿನ ಫುಡ್ ಕ್ರಾಪ್ಟ್ ಸಂಸ್ಥೆಯ ಪ್ರಾಂಶುಪಾಲರಾದ ಡಾ.ಎಸ್.ಕಣ್ಣನ್ ಅವರು ಜಿಲ್ಲೆಯ ಹೋಂಸ್ಟೇಗಳ ಸಂಬAಧಿಸಿದAತೆ ಮಾಹಿತಿ ನೀಡಿದರು. ಗ್ರೀನ್ ಪಾರ್ಕ್ ಸಂಸ್ಥೆಯ ಎಚ್.ಆರ್.ಜಯರಾಮ್ ಅವರು ಪರಿಸರ ಮತ್ತು ಸುಸ್ಥಿರ ಪ್ರವಾಸ ಕುರಿತು ಮಾತನಾಡಿದರು.

ಟರ‍್ಸ್ ಮತ್ತು ಟ್ರಾವೆಲ್ ಅಸೋಷಿಯೇಷನ್‌ನ ಅಧ್ಯಕ್ಷ ಕುಪ್ಪಂಡ ವಸಂತ, ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಉಪಾಧ್ಯಕ್ಷ ಅಂಬೆಕಲ್ಲು ನವೀನ್, ಪ್ರಧಾನ ಕಾರ್ಯದರ್ಶಿ ಮೋಂತಿ ಗಣೇಶ್, ಪ್ರಮುಖರಾದ ಜಿ.ಚಿದ್ವಿಲಾಸ್, ಬಿ.ಜಿ. ಅನಂತಶಯನ, ಅನಿಲ್ ಎಚ್.ಟಿ., ಸಿ.ಜಿ.ಕುಶಾಲಪ್ಪ, ಸೋಮವಾರಪೇಟೆ ಹೋಂಸ್ಟೇ ಅಸೋಷಿಯೇಷನ್‌ನ ಅಧ್ಯಕ್ಷರಾದ ಸಿ.ಕೆ. ರೋಹಿತ್, ಹೋಂ ಸ್ಟೇ, ರೇಸಾರ್ಟ್ ಹಾಗೂ ಟ್ರಾವೆಲ್ ಅಸೋಷಿಯೇಷನ್ ಸದಸ್ಯರು ಇತರರು ಪಾಲ್ಗೊಂಡಿದ್ದರು.

ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕಿ ಅನಿತಾ ಭಾಸ್ಕರ್ ಸ್ವಾಗತಿಸಿದರು. ಚೋಂದಮ್ಮ ಮತ್ತು ಸ್ವಪ್ನಾ ನಾಡಗೀತೆ ಹಾಡಿದರು. ಕೆ.ಜೆ.ದಿವಾಕರ ನಿರೂಪಿಸಿ, ವಂದಿಸಿದರು.