ಚೆಯ್ಯಂಡಾಣೆ, ಸೆ. ೩೦: ಕಕ್ಕಬ್ಬೆ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು.

ಕುಂಜಿಲ ಕಕ್ಕಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪಾ ಲೋಕೇಶ್ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆ ಭಾಗೀರಥಿ ಪೋಷಣ್ ಮಾಸಾಚರಣೆ ಕಾರ್ಯಕ್ರಮದ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು.

ಆಶಾ ಕಾರ್ಯಕರ್ತೆ ಅಶ್ವಿನಿ ಪೌಷ್ಟಿಕತೆಯ ಬಗ್ಗೆ, ಸಂಜೀವಿನಿ ಒಕ್ಕೂಟದ ಎಂಬಿಕೆ ಸ್ವಪ್ನ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಪಶು ಸಖಿ ಸುಧಾ, ಸ್ತಿçà ಶಕ್ತಿ ಸಂಘದ ಅಧ್ಯಕ್ಷೆ ಯಶೋಧ, ಗರ್ಭಿಣಿ ಬಾಣಂತಿ ಮಹಿಳೆಯರು, ಸ್ವಸಹಾಯ ಸಂಘದ ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.