ವೀರಾಜಪೇಟೆ, ಅ. ೧: ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಬದುಕು ಸ್ವಾತಂತ್ರö್ಯ, ಸರಳತೆ, ಅಹಿಂಸಾ ಮಾರ್ಗ ಸೇರಿದಂತೆ ವಿವಿಧ ವಿಷಯಗಳ ಕುರಿತು ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧೀಜಿಯವರ ೧೫೫ನೇ ಜಯಂತಿಯ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವೀರಾಜಪೇಟೆಯ ಸಂತ ಅನ್ನಮ್ಮ ಪ್ರೌಢಶಾಲೆಯ ಕೆ.ಎಂ. ಚೈತನ್ಯ ತೃತೀಯ ಸ್ಥಾನ ಗಳಿಸಿದ್ದಾರೆ.
ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ ಕಚೇರಿಯ ಸುಲೋಚನ ಸಭಾಂಗಣದಲ್ಲಿ ತಾ.೨ರಂದು (ಇಂದು) ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುಮಾನ ವಿತರಣೆ ಮಾಡಲಿದ್ದಾರೆ.
ಚೈತನ್ಯ ೧೦ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ವೀರಾಜಪೇಟೆಯ ಮಂಜುನಾಥ್ ಮತ್ತು ಕುಮಾರಿ ದಂಪತಿಯ ಪುತ್ರಿ.